ಸಿದ್ದರಾಮಯ್ಯ ಬಿಜೆಪಿ ಸೇರುತ್ತಾರೆಯೇ? ಸ್ವತಃ ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ
Team Udayavani, Mar 9, 2020, 1:08 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದಿದ್ಧಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ. ಎಂದಿದ್ಧಾರೆ.
ಮತ್ತೊಂದು ಟ್ವಿಟ್ ನಲ್ಲಿ, ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದಿದ್ದಾರೆ.
ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ