‘ಕಾವೇರಿ’ಯಿಂದ ಶಿಫ್ಟ್ ಆದ ಸಿದ್ದರಾಮಯ್ಯ

Team Udayavani, Jan 29, 2020, 7:06 PM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊನೆಗೂ “ಕಾವೇರಿ’ ನಿವಾಸ ಬಿಟ್ಟುಕೊಟ್ಟು ಗಾಂಧಿ ಭವನದ ಹಿಂಭಾಗದ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ.

ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದಾಗ ವಾಸವಿದ್ದ ಗಾಂಧಿ ಭವನ ಹಿಂಭಾಗದ ಸರ್ಕಾರಿ ನಿವಾಸದಲ್ಲಿ ಬುಧವಾರ ಪೂಜೆ ಸಲ್ಲಿಸಿ ಪ್ರವೇಶಿಸಿದರು.

ಸಿದ್ದರಾಮಯ್ಯ ಅವರಿಗೆ ಹಂಚಿಕೆಯಾದ ಹಿನ್ನೆಲೆಯಲ್ಲಿ ನಿವಾಸಕ್ಕೆ ಸುಣ್ಣ ಬಣ್ಣ ಹೊಡೆಸಿ ಸಜ್ಜಾಗಿಸಲಾಗಿತ್ತು. ಪೂಜೆ ಪ್ರಯುಕ್ತ ಬುಧವಾರ ಹೂವಿನಿಂದ ಮನೆ ಅಲಂಕರಿಸಲಾಗಿತ್ತು. ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರ.

ಈ ನಿವಾಸದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಾಸವಿದ್ದರು. ಆ ನಂತರ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆ ನಿವಾಸಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ, ಕಾವೇರಿ ಖಾಲಿ ಮಾಡಲು ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿತ್ತು. ಆಗ ಅವರು ಗಾಂಧಿ ಭವನ ಸಮೀಪದ ಸರ್ಕಾರಿ ನಿವಾಸ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಅದರಂತೆ ಹಂಚಿಕೆ ಮಾಡಲಾಗಿತ್ತು.

ಆರು ವರ್ಷಗಳ ಕಾಲ ಕಾವೇರಿಯಲ್ಲಿ ವಾಸ್ತವ್ಯವಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರವೂ ಜೆಡಿಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಕೆ.ಜೆ.ಜಾರ್ಜ್‌ ಅವರಿಗೆ ಕಾವೇರಿ ಹಂಚಿಕೆ ಮಾಡಲಾಗಿತ್ತಾದರೂ ಸಿದ್ದರಾಮಯ್ಯ ಅವರೇ ವಾಸವಿದ್ದರು.

ಸಿಎಂ ಬರ್ತಾರೆ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇದೀಗ ಕಾವೇರಿ ನಿವಾಸದಲ್ಲಿ ವಾಸ್ತವ್ಯ ಹೂಡಲು ತೀರ್ಮಾನಿಸಿದ್ದಾರೆ.

ಮುಖ್ಯಮಂತ್ರಿಯವರ ವಾಸ್ತವ್ಯಕ್ಕಾಗಿ ಕಾವೇರಿ ನಿವಾಸಕ್ಕೆ ಸುಣ್ಣ ಬಣ್ಣ ಬಳಿದು ವಾಸ್ತು ಪ್ರಕಾರ ಕೆಲವೊಂದು ಬದಲಾವಣೆ ಮಾಡಿ ಪ್ರವೇಶ ಮಾಡಲಿದ್ದಾರೆ.

ಗೃಹ ಕಚೇರಿ ಕೃಷ್ಣಾ ಪಕ್ಕದಲ್ಲಿಯೇ ಕಾವೇರಿ ಇರುವುದರಿಂದ ಮುಖ್ಯಮಂತ್ರಿಯವರು ಅಲ್ಲಿ ವಾಸ್ತವ್ಯ ಇದ್ದರೆ ದೈನಂದಿನ ಕೆಲಸ ಕಾರ್ಯಗಳು, ಜನರ ಕುಂದು ಕೊರತೆ ಆಲಿಸುವಿಕೆ, ಅಧಿಕಾರಿಗಳ ಸಭೆಗೆ ಸಹಕಾರಿಯಾಗಲಿದೆ.

ಪ್ರಸ್ತುತ ಡಾಲರ್ ಕಾಲೋನಿಯ ದವಳಗಿರಿ ನಿವಾಸದಲ್ಲಿ ವಾಸವಿರುವ ಯಡಿಯೂರಪ್ಪ ಅವರು ಅಲ್ಲಿಂದ ನಿತ್ಯ ಕೃಷ್ಣಾಗೆ ಆಗಮಿಸಿ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...

ಹೊಸ ಸೇರ್ಪಡೆ