ಮತ್ತೆ ಸಿದ್ದು ಸಿಎಂ ಕೂಗು : ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ಸಂಚಲನ ಮೂಡಿಸಿದ ಹೇಳಿಕೆ


Team Udayavani, May 8, 2019, 6:06 AM IST

cm-koogu

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ನಡೆಯಲಿದೆ ಎಂಬ ಮಾತುಗಳ ನಡುವೆಯೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌ ಅವರು ಸಿದ್ದರಾಮಯ್ಯ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದ ಬೆನ್ನಲ್ಲೇ ಸಚಿವ ಎಂ.ಬಿ. ಪಾಟೀಲ್‌ ಸಹ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ನಡೆಸಿದ್ದು, ಅವರು ಮತ್ತೆ ಮುಖ್ಯಮಂತ್ರಿಯಾಗಲಿ. ಅದರಲ್ಲಿ ತಪ್ಪೇನು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ನಾನೂ ಮುಖ್ಯಮಂತ್ರಿ ಆಕಾಂಕ್ಷಿಯೇ. ಆದರೆ ಸಿದ್ದರಾಮಯ್ಯ ಅವರಿಗೆ ಮತ್ತೂಮ್ಮೆ ಮುಖ್ಯಮಂತ್ರಿಯಾಗುವ ಅರ್ಹತೆಯಿದೆ. ಅವರು ಮುಖ್ಯಮಂತ್ರಿಯಾಗುವುದಾದರೆ ನಾನು ಬೇಕಾದರೆ ಕಾಯುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ಗೆ ಬೇಷರತ್‌ ಬೆಂಬಲ ವ್ಯಕ್ತಪಡಿಸಿರುವುದರಿಂದ ನಾಲ್ಕು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿ. ಏನಾದರೂ ಬದಲಾವಣೆ ಇದ್ದರೆ ದೇವೇಗೌಡ ಮತ್ತು ರಾಹುಲ್‌ ಗಾಂಧಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಅಪ್ರಸ್ತುತ ವಿಷಯ
ಮತ್ತೂಂದೆಡೆ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಈಗ ಅಪ್ರಸ್ತುತ. ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು ಆ ಬಗ್ಗೆ ಅನಿವಾರ್ಯ ಆದರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಶಾಸಕರು ಪದೇ ಪದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಎಂಬ ಹೇಳಿಕೆ ನೀಡದಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಆದರೂ ಇದು ಮೈತ್ರಿ ಸರಕಾರದಲ್ಲಿ ನಾನಾ ರೀತಿಯ ವಿಶ್ಲೇಷಣೆಗಳಿಗೆ ಎಡೆಮಾಡಿದೆ ಎಂಬ ಅನುಮಾನ ಮೂಡಿಸಿದೆ.

ವಿಧಾನಸಭೆಗೆ ಚುನಾವಣೆ ಗುಸು ಗುಸು
ಲೋಕಸಭೆ ಚುನಾವಣೆ ಫ‌ಲಿತಾಂಶದ ಅನಂತರ ರಾಜ್ಯದಲ್ಲಿ ವಿಧಾನಸಭೆಗೆ ಹೊಸದಾಗಿ ಚುನಾವಣೆ ನಡೆಯಬಹುದು ಎಂಬ ಗುಸು ಗುಸು ವಿಧಾನ ಸೌಧದಲ್ಲಿ ಕೇಳಿಬರುತ್ತಿದೆ.

ಕೇಂದ್ರದಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಅಥವಾ ಪ್ರಾದೇಶಿಕ ಪಕ್ಷಗಳ ನೇತೃತ್ವದ ಸರಕಾರ ರಚನೆಯಾದರೆ ರಾಜ್ಯದಲ್ಲಿ ವಿಧಾನಸಭೆ ವಿಸರ್ಜಿಸಿ ಹೊಸದಾಗಿ ಚುನಾವಣೆಗೆ ಹೋಗುವ ಸಾಧ್ಯತೆಯಿದೆ. ಕಾಂಗ್ರೆಸ್‌ ಕಡೆಯಿಂದಲೇ ಆ ಬೇಡಿಕೆ ಕೇಳಿಬರಬಹುದು. ಕಾಂಗ್ರೆಸ್‌ ಪಕ್ಷಕ್ಕೆ 13ರಿಂದ 15 ಸ್ಥಾನಗಳು ಬಂದರೆ ಹೊಸದಾಗಿ ಚುನಾವಣೆಗೆ ಹೋಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಡಿಕೆಶಿ
ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ ಸೇರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಗಿಸಲಿದ್ದಾರೆ ಎಂಬ ಬಿಜೆಪಿ ನಾಯಕ ಬಸವರಾಜ ಪಾಟೀಲ್‌ ಯತ್ನಾಳ್‌ ಅವರ ಹೇಳಿಕೆಗೆ ಸಚಿವ ಸತೀಶ್‌ ಜಾರಕಿಹೊಳಿ ಟಾಂಗ್‌ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಸ್‌ ಲೀಡರ್‌. ಅವರು ಯಾವತ್ತಿಗೂ ಲೀಡರ್ರೆà. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮತ್ತೂಂದೆಡೆ ಡಿ.ಕೆ.ಶಿವ ಕುಮಾರ್‌ ಮಾತನಾಡಿ, ಸಿದ್ದ ರಾಮಯ್ಯ ನಮ್ಮ ನಾಯಕರು. ಪ್ರತಿನಿತ್ಯ ನಾವು ಅವರ ಕೈ ಬಲಪಡಿಸುವ ಕೆಲಸವನ್ನೇ ಮಾಡುತ್ತಿದ್ದೇವೆ. ಅವರನ್ನು ಮೂಲೆಗುಂಪು ಮಾಡುವುದು ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಚಾರಕ್ಕೆ ಕೈಕೊಟ್ಟ ಶಾಸಕರ ವಿರುದ್ಧ ವೇಣು ಗರಂ
ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಉಪ ಚುನಾವಣ ಪ್ರಚಾರಕ್ಕೆ ಹೋಗದೆ ಕೈಕೊಟ್ಟಿ ರುವ ಕಾಂಗ್ರೆಸ್‌ ಶಾಸಕರ ವಿರುದ್ಧ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಗರಂ ಆಗಿದ್ದಾರೆ.

ಈ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಹಾಲಿ ಸಚಿವರು, ಮಾಜಿ ಸಚಿವರ ಜತೆಗೆ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳಿಗೆ ಹೋಬಳಿವಾರು ಹೊಣೆಗಾರಿಕೆ ನೀಡಲಾಗಿತ್ತು. ಆದರೆ ಪ್ರಮುಖ ನಾಯಕರನ್ನು ಹೊರತು ಪಡಿಸಿ ಶಾಸಕರು ಪ್ರಚಾರಕ್ಕೆ ಹೋಗಿಲ್ಲ. ಹೊಣೆಗಾರಿಕೆ ನಿಭಾಯಿಸದವರ ಬಗ್ಗೆ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ ನಾಯಕರ ಗೈರು
ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿ ಹಾಕದೆ ಕಾಂಗ್ರೆಸ್‌ ಅಭ್ಯರ್ಥಿ ಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರೂ ಆ ಪಕ್ಷದ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಕೋನರೆಡ್ಡಿ, ಬಸವರಾಜ ಹೊರಟ್ಟಿ ಹೊರತುಪಡಿಸಿದರೆ ಬೇರೆ ನಾಯಕರು ಪ್ರಚಾರದಲ್ಲಿ ಭಾಗ ವಹಿಸು ತ್ತಿಲ್ಲ. ಕೇವಲ ಕಾಂಗ್ರೆಸ್‌ ನಾಯಕರು ಮಾತ್ರ ಪಾಲ್ಗೊ ಳ್ಳುತ್ತಿದ್ದಾರೆ. ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಗೆ ಚಿಂತೆ
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಯಾಗ ಬೇಕು ಎಂಬ ಕಾಂಗ್ರೆಸ್‌ ಶಾಸಕರು ಮತ್ತು ಸಚಿವರ ಹೇಳಿಕೆಗಳು ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವರಿಗೆ ತಲೆನೋವು ತಂದಿದೆ. ಸಮ್ಮಿಶ್ರ ಸರಕಾರ ರಚನೆ ಯಾದಾಗಿನಿಂದ ಆಗಾಗ್ಗೆ ಸರಕಾರ ಪತನಗೊಳ್ಳಲಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಅಧಿಕಾರಿ ವಲಯದಲ್ಲಿ ಈ ಸರಕಾರ ಸ್ಥಿರವಲ್ಲ ಎಂಬ ಭಾವನೆ ಮೂಡಿ ಕೆಲಸ-ಕಾರ್ಯಗಳು ಆಗುತ್ತಿಲ್ಲ. ಆಡಳಿತ ಯಂತ್ರವೂ ಚುರುಕಾಗಿಲ್ಲ. ಈಗ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಲೆಕ್ಕಾಚಾರದ ಜತೆಗೆ ಫ‌ಲಿತಾಂಶದ ಆಧಾರದಲ್ಲಿ ಸರಕಾರ ಇರುತ್ತಾ? ಪತನವಾಗುತ್ತಾ? ಎಂಬ ಪ್ರಶ್ನೆಯ ಜತೆಗೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಒತ್ತಾಯ ಜೆಡಿಎಸ್‌ಗೆ ಇರಿಸು ಮುರಿಸು ತಂದಿದೆ.

ಒಂದೆಡೆ ಬಿಜೆಪಿಯವರು ಆಪರೇಷನ್‌ ಕಮಲ ಮೂಲಕ ಸರಕಾರ ಉರುಳಿಸಲು ಕಾರ್ಯತಂತ್ರ ರೂಪಿಸಿದ್ದರೆ, ಮತ್ತೂಂದೆಡೆ ಮಿತ್ರ ಪಕ್ಷ ಕಾಂಗ್ರೆಸ್‌ ನಾಯಕರೇ
ಕುಮಾರ ಸ್ವಾಮಿ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸದೆ ಪದೇ ಪದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಿರುವುದಕ್ಕೆ ಜೆಡಿಎಸ್‌ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.