ಹದಿನಾರು ವರ್ಷದ ಹಿಂದಿನ ಕಳವು ಪ್ರಕರಣ: ನಾಗರಾಜ್‌ ಬಳೆಗಾರ್‌ಗೆ 5 ವರ್ಷ ಜೈಲು

Team Udayavani, Mar 5, 2022, 7:35 AM IST

ಹದಿನಾರು ವರ್ಷದ ಹಿಂದಿನ ಕಳವು ಪ್ರಕರಣ: ನಾಗರಾಜ್‌ ಬಳೆಗಾರ್‌ಗೆ 5 ವರ್ಷ ಜೈಲು

ಸಾಂದರ್ಭಿಕ ಚಿತ್ರ.

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ಮನೆಯೊಂದರಿಂದ ಅಪ್ರಾಪ್ತ ವಯಸ್ಕ ನೊಂದಿಗೆ ಚಿನ್ನಾಭರಣ ಕಳವು ಮಾಡಿದ 16 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಾಗರಾಜ್‌ ಬಳೆಗಾರನಿಗೆ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ರಮೇಶ್‌ ಎಂ. ಅವರನ್ನೊಳಗೊಂಡ ಪೀಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆರೋಪಿ ವಿರುದ್ಧ ತೀರ್ಪು ನೀಡಿದೆ.

2006ರ ಮಾ. 14ರಂದು ಆರೋಪಿ ಸುರತ್ಕಲ್‌ ಸಮೀಪದ ವಿದ್ಯಾನಗರ ನಿವಾಸಿಯಾಗಿದ್ದ ನಾಗರಾಜ್‌ ಬಳೆಗಾರ, ಬಾಲಕನ ಜತೆ ಸೇರಿ ಮೊಟ್ಟೆತ್ತಡ್ಕದ ಮಹೇಂದ್ರ ಕುಮಾರ್‌ ಅವರ ಮನೆಯಿಂದ ಚಿನ್ನಾಭರಣ ಕಳವು ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಡಿಸಿಐಬಿ ನಿರೀಕ್ಷಕರಾಗಿದ್ದ ತಿಲಕ್‌ಚಂದ್ರ ಬಂಧಿಸಿದ್ದರು. ಈ ಪೈಕಿ ಬಾಲಕನನ್ನು ಬಾಲಾಪರಾಧಿಯ ಕಾರಣಕ್ಕಾಗಿ ಬಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ನಾಗರಾಜ್‌ ಜಾಮೀನು ಪಡೆದು ಬಿಡುಗಡೆ ಹೊಂದಿದ್ದ. ಈ ಪ್ರಕರಣದಲ್ಲಿ ನಾಗರಾಜನಿಗೆ ಸೆಕ್ಷನ್‌ 457ರಲ್ಲಿ 5 ವರ್ಷ ಮತ್ತು ಸೆಕ್ಷನ್‌ 380ರಲ್ಲಿ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಾಸಿಕ್ಯೂಷನ್‌ ಪರ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ವಾದಿಸಿದ್ದರು.

ನಾಗರಾಜನ ಮೇಲಿತ್ತು 25ಕ್ಕೂ ಅಧಿಕ ಕೇಸು
ನಾಗರಾಜ್‌ ಬಳೆಗಾರ್‌ ಯಾನೆ ಸತೀಶ್‌ (37) ಮೂಲತಃ ಬ್ರಹ್ಮಾವರದ ಬೈಕಾಡಿಯವ. ಈತನನ್ನು ಉಡುಪಿಗೆ ಕರೆತರುತ್ತಿದ್ದಾಗ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ. ಪೊಲೀಸ್‌ ಮೂಲಗಳ ಪ್ರಕಾರ ಈತ ಸುಮಾರು 3 ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಕುಖ್ಯಾತ ಆರೋಪಿ. 2013ರ ಅಕ್ಟೋಬರ್‌ನಲ್ಲಿ ಗೋವಾ ದಲ್ಲಿ ನಡೆದ ಕಳವು ಪ್ರಕರಣದಲ್ಲಿ ಪತ್ನಿಯ ಜತೆ ಗೋವಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಅದಕ್ಕೂ ಮೊದಲು ಆತ ಉಡುಪಿಯ ಹಿರಿಯಡಕ ಸಬ್‌ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾಗ 2011ರ ಜ. 14ರಂದು ಉಡುಪಿಯ ರೌಡಿ ವಿನೋದ್‌ ಶೆಟ್ಟಿಗಾರ್‌ನನ್ನು ತನ್ನ ಅಣ್ಣ ಮುತ್ತಪ್ಪ ಮತ್ತು ಇತರ ಇಬ್ಬರ ಜತೆಗೂಡಿ ಜೈಲಿನೊಳಗೆ ಚೂರಿಯಿಂದ ಇರಿದು ಕೊಲೆಗೈದ ಆರೋಪಿಯಾಗಿದ್ದ. ನಾಗರಾಜನ ಪತ್ನಿಯೇ ಕೇಕ್‌ನೊಳಗೆ ಚೂರಿ ಇಟ್ಟು ಜೈಲಿನೊಳಗೆ ಅದನ್ನು ಕೊಟ್ಟು ಕೊಲೆಗೆ ಸಾಥ್‌ ಕೊಟ್ಟಿದ್ದಳು. ಆತನ ಮೇಲೆ ಕರ್ನಾಟಕ, ಕೇರಳ, ಗೋವಾ ರಾಜ್ಯ ಸಹಿತ ಇತರೆಡೆಯ ಠಾಣೆಗಳಲ್ಲಿ 25ಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.