ಕೋವ್ಯಾಕ್ಸಿನ್ ಪಡೆದ ನಟ ಕಮಲ್ ಹಾಸನ್, ಮುಂದಿನ ತಿಂಗಳು ಭ್ರಷ್ಟಾಚಾರದ ವಿರುದ್ಧ ಲಸಿಕೆ!
ಕೊರೊನಾ ಲಸಿಕೆ ಪಡೆದ ಕಮಲ್ ಹಾಸನ್
Team Udayavani, Mar 2, 2021, 3:24 PM IST
ನವದೆಹಲಿ : ಭಾರತದಾದ್ಯಂತ ಸೋಮವಾರ(ಮಾರ್ಚ್ 01)ದಿಂದ ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ನಿನ್ನೆಯಿಂದ 60 ವರ್ಷ ಮೇಲ್ಪಟ್ಟವರು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಇಂದು ತಮಿಳು ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಡೋಸ್ ಪಡೆದ ನಂತ್ರ ಟ್ವೀಟ್ ಮಾಡಿರುವ ನಟ, ತಮ್ಮ ಬಗ್ಗೆ ಮಾತ್ರವಲ್ಲದೆ ಇತರರ ಬಗ್ಗೆಯೂ ಕಾಳಜಿ ವಹಿಸುವವರು ಇದನ್ನು ಸಹಿಸಿಕೊಳ್ಳಬೇಕು. ಇದೀಗ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಿದೆ. ಮುಂದಿನ ತಿಂಗಳು ಭ್ರಷ್ಟಾಚಾರದ ವಿರುದ್ಧ ಲಸಿಕೆ ಹಾಕಲಾಗುವುದು… ತಯಾರಾಗಿ ಎಂದು ಬರೆದುಕೊಂಡಿದ್ದಾರೆ.
ಚೆನ್ನೈನ ಶ್ರೀ ರಾಮಚಂದ್ರ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಪಡೆದಿರುವ ಇವರು, ಭಾರತದ ನಟರ ಪೈಕಿ ಮೊಟ್ಟ ಮೊದಲನೆಯದಾಗಿ ಕೋವಿಡ್ ಲಸಿಕೆ ಹಾಕಿಸಿಕೊಂಡ ನಟ ಎಂಬ ಹೆಗ್ಗಳಿಕೆಗೆ ಕಮಲ್ ಹಾಸನ್ ಭಾಜನರಾಗಿದ್ದಾರೆ.
ಇನ್ನು ನಿನ್ನೆ ಪ್ರಧಾನ ಮಂತ್ರಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಒಡಿಶಾ ಸಿಎಂ ನವೀನ್ ಪಟ್ನಾಯಕ್, ರಾಜಸ್ಥಾನ ಗರ್ವನರ್ ಕಾಲ್ರಾಜ್ ಮಿಶ್ರಾ, ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್, ಎನ್ಸಿಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್, ಕೇಂದ್ರ ಸಚಿವ ಜಗದೀಶ್ ಶೆಟ್ಟರ್ ಸೇರದಂತೆ ಹಲವರು ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ