ಅತೃಪ್ತ ಶಾಸಕರಿಗೆ ಸ್ಪೀಕರ್‌ ಗಡುವು

Team Udayavani, Jul 23, 2019, 6:59 AM IST

ಬೆಂಗಳೂರು: ರಾಜೀನಾಮೆ ಸಲ್ಲಿಸಿರುವ 15 ಮಂದಿ ಶಾಸಕರಿಗೂ ತನ್ನ ಮುಂದೆ ಮಂಗಳವಾರ ಬೆಳಗ್ಗೆ 11 ಗಂಟೆಯೊಳಗೆ ಹಾಜರಾಗುವಂತೆ ಸ್ಪೀಕರ್‌ ರಮೇಶ್‌ ಕುಮಾರ್‌ ನೋಟಿಸ್‌ ನೀಡಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಸಂವಿಧಾನದ ಶೆಡ್ಯೂಲ್ 10ರ ಪ್ರಕಾರ ಅಭಿಪ್ರಾಯ ನೀಡುವಂತೆ ಸ್ಪೀಕರ್‌ ನೋಟಿಸ್‌ ನೀಡಿದ್ದಾರೆ. ನಿಮಗೆ ಸಚಿವರಾಗಲು ಆಸೆಯಿದೆ. ಅದಕ್ಕಾಗಿ ಬಿಜೆಪಿಗೆ ಅನುಕೂಲ ಮಾಡಿ ಕೊಡುತ್ತಿದ್ದೀರಿ. ಆದರೆ ನೀವು ಸದಸ್ಯತ್ವ ಕಳೆದುಕೊಳ್ಳ ಲಿದ್ದೀರಿ. ಸಂವಿಧಾನದ ವಿಧಿ 164 (ಐ)(3)ರ ಪ್ರಕಾರ ಅದಕ್ಕೆ ಅವಕಾಶವಿದೆ ಎಂದು ಹೇಳಿದರು.

ಕುಮಾರಸ್ವಾಮಿ ಗರಂ

ವಿಶ್ವಾಸಮತ ನಿರ್ಣಯ ಮತಕ್ಕೆ ಹಾಕುವ ಸಂಬಂಧ ಚರ್ಚೆಯಲ್ಲೇ ಕಾಲ ತಳ್ಳಲಾಗುತ್ತಿದೆ ಎಂದು ಬಿಜೆಪಿಯ ಮಾಧುಸ್ವಾಮಿ ಹಲವಾರು ಬಾರಿ ಅಸಮಾಧಾನ ಹೊರಹಾಕಿದರು. ಸ್ಪೀಕರ್‌ ಅವರನ್ನು ಕುರಿತು, ನೀವು ಆ ಸ್ಥಾನದಲ್ಲಿದ್ದಾಗ ಇಂತಹ ಬೆಳವಣಿಗೆ ನಡೆಯುವುದು ಸರಿಯಲ್ಲ. ದಯವಿಟ್ಟು ಸದನದ ಗೌರವ ಉಳಿಸಿ ಎಂದು ಮನವಿ ಮಾಡಿದರು. ಇದಕ್ಕೆ ಆಕ್ರೋಶಗೊಂಡ ಕುಮಾರಸ್ವಾಮಿ, ಸದನದ ಗೌರವ ಏನಾಗಿದೆ. ನೀವು 15 ದಿನಗಳಿಂದ ಏನೆಲ್ಲ ಡ್ರಾಮಾ ಮಾಡುತ್ತಿದ್ದೀರಿ ಎಂದು ಗೊತ್ತಿದೆ ಎಂದು ಗರಂ ಆದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ