ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

Team Udayavani, Feb 2, 2023, 6:45 AM IST

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

ಬೆಂಗಳೂರು: ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು, ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬಿಇಒಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಅಪ್‌ಲೋಡ್‌ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್‌ ರೂಂನಲ್ಲಿ ಗೌಪ್ಯವಾಗಿ ಮತ್ತು ಸುರಕ್ಷಿತವಾಗಿ ಇಡಬೇಕು. ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು. ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಪರೀಕ್ಷಾ ಶುಲ್ಕವಾಗಿ ಪ್ರತಿ ವಿದ್ಯಾರ್ಥಿಗಳಿಂದ 60 ರೂ.ಗಳನ್ನು ಮಾತ್ರ ಸಂಗ್ರಹಿಸಲು ಸೂಚಿಸಿದೆ. ಈ ಶುಲ್ಕವನ್ನು ಶಾಲಾ ಮುಖ್ಯೋಪಾಧ್ಯಾಯರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು. ಬಿಇಒಗಳು ಪರೀಕ್ಷಾ ಶುಲ್ಕ ಸ್ವೀಕರಿಸಿದ ಮತ್ತು ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣ ಸಮಯದಲ್ಲಿ ಹಾಜರುಪಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

siren car

ಹೀಗೂ ಉಂಟು: ಸಿಎಂ ಪಟ್ಟ ಪಡೆದ ಕರಾವಳಿಯ ಇಬ್ಬರೂ ನ್ಯಾಯವಾದಿಗಳು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’