ರಾಜ್ಯ ಬಜೆಟ್‌ಗೆ ಉಡುಪಿ ಜಿಲ್ಲೆಯ ನಿರೀಕ್ಷೆಗಳು: ನದಿಗಳ ಮಾಲಿನ್ಯ ತಪ್ಪಲಿ


Team Udayavani, Feb 2, 2023, 6:10 AM IST

state-budget

ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ಗೂ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಗಳ ಮಹಾಪೂರವೇ ಹರಿಯ ಬಹುದು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಿಂದಲೂ ಬಜೆಟ್‌ ನಿರೀಕ್ಷೆ ಸಾಕಷ್ಟಿವೆ.

ಉಡುಪಿ ಜಿಲ್ಲೆಗೊಂದು ಪೊಲೀಸ್‌ ತರಬೇತಿ ಅಕಾಡೆಮಿ ಆಗಬೇಕು ಎಂಬ ಬೇಡಿಕೆ ಸಾಕಷ್ಟು ವರ್ಷದಿಂದಲೂ ಇದೆ. ರಾಜ್ಯ ವಿಪತ್ತು ನಿರ್ವಹಣ ಘಟಕ (ಎಸ್‌ಡಿಆರ್‌ಎಫ್) ಉಡುಪಿ ಜಿಲ್ಲೆಯಲ್ಲಿ ಆರಂಭಿಸಬೇಕು ಎಂಬ ಆಗ್ರಹವೂ ಇದೆ. ಎಸ್‌ಡಿಆರ್‌ಎಫ್ಗೆ ಮಲ್ಪೆಯಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಿ ದ್ದರೂ ಶಾಶ್ವತ ವ್ಯವಸ್ಥೆ ಆಗಿಲ್ಲ. ಕರಾವಳಿ ಯಲ್ಲಿ ಮಳೆಗಾಲದಲ್ಲಿ ಕಡಲ್ಕೊರತೆ ಹೆಚ್ಚಿರುತ್ತದೆ. ಇದಕ್ಕೊಂದು ಶಾಶ್ವತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್‌ ಘೋಷಣೆ ಯೂ ಆಗಬೇಕಿದೆ ಎಂಬ ಬೇಡಿಕೆ ಇದೆ.

ಶಿವಳ್ಳಿ ಕೈಗಾರಿಕೆ ಪ್ರದೇಶ, ಮೀಯಾರು, ಬೆಳಪು, ನಂದಿಕೂರು ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ ಆಗಬೇಕು. ಕೈಗಾರಿಕೆ ಪ್ರದೇಶಗಳನ್ನು ಸಂದಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆ ಅಭಿವೃದ್ಧಿ ಮತ್ತು ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೂ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗೆ ಸಮಗ್ರ ಅಭಿವೃದ್ಧಿಗೆ ನಿರ್ದಿಷ್ಟ ಅನುದಾನ ಮೀಸಲಿಡಬೇಕು. ಬೈಂದೂರಿನಲ್ಲಿ ವಿಮಾನ ನಿಲ್ದಾಣದ ಪ್ರಸ್ತಾವನೆಗೆ ಜೀವ ತುಂಬಬೇಕಿದೆ. ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಮಾಡಲು ಎಲ್ಲ ವ್ಯವಸ್ಥೆಯಿದೆ, ಮೂಲ ಅನುದಾನದೊಂದಿಗೆ ಕಾಲೇಜು ಘೋಷಣೆ ಆಗಬೇಕು. ಸಕ್ಕರ ಕಾರ್ಖಾನೆಗೆ ಮರುಜೀವ ನೀಡಬೇಕು. ಮಣಿಪಾಲ, ಪಡುಬಿದ್ರಿ ಮೊದಲಾದ ಕಡೆಗಳಲ್ಲಿ ಅಗ್ನಿಶಾಮಕ ಘಟಕ ಸಹಿತ ಹಲವು ನಿರೀಕ್ಷೆಗಳಿವೆ.
ಮೀನುಗಾರಿಕೆಗೆ ಅನುಕೂಲ ವಾಗುವಂತೆ ಹೆಚ್ಚಿನ ಅನುದಾನದ ನಿರೀಕ್ಷೆಯಿದೆ. ಡೀಸೆಲ್‌, ಸೀಮೆಎಣ್ಣೆ ಪೂರೈಕೆ ವ್ಯತ್ಯಯವಾಗದಂತೆ ನೋಡಿ ಕೊಳ್ಳುವ ಜತೆಗೆ ವಿವಿಧೆಡೆ ಜೆಟ್ಟಿ ನಿರ್ಮಾಣ, ಬಂದರುಗಳ ಹೂಳೆತ್ತುವುದು ಸಹಿತವಾಗಿ ಸಮಗ್ರ ಅಭಿವೃದ್ಧಿ ಮತ್ತು ಜಿಲ್ಲೆ ಗೊಂದು ಶೀತಲೀಕರಣ ಘಟಕಕ್ಕೆ ವಿಶೇಷ ಅನುದಾನ ಒದಗಿಸುವ ಬಗ್ಗೆಯೂ ನಿರೀಕ್ಷೆ ಹೊಂದಲಾಗಿದೆ. ಕೃಷಿ, ತೋಟಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸೇರಿದಂತೆ ಸಮಗ್ರತೆಯ ಆಧಾರದಲ್ಲಿ ಕರಾವಳಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ, ಅದರಡಿ ಉಡುಪಿ ಜಿಲ್ಲೆಗೆ ನಿರ್ದಿಷ್ಟ ಪ್ರಮಾಣದ ಅನುದಾನ ಮೀಸಲಿಡಬೇಕು ಎಂಬ ಆಗ್ರಹವೂ ಇದೆ.

ನದಿಗಳ ಮಾಲಿನ್ಯ ತಪ್ಪಲಿ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೂಕ್ತವಾದ ಯುಜಿಡಿ ವ್ಯವಸ್ಥೆಯಿಲ್ಲ. 330 ಕೋ.ರೂ. ವೆಚ್ಚದ ಪ್ರಸ್ತಾವನೆ ಸರಕಾರದ ಹಂತದಲ್ಲಿದೆ. ಅದ ಕ್ಕೊಂದು ಒಪ್ಪಿಗೆ ಸಿಕ್ಕರೆ ಉಡುಪಿ ನಗರದ ಯುಜಿಡಿ ಸಮಸ್ಯೆಗೆ ಮುಕ್ತಿ ಸಿಗಲಿದೆ ಮತ್ತು ನದಿ ಕಲುಷಿತವಾಗುವುದು ತಪ್ಪಲಿದೆ. ಸುಸಜ್ಜಿತ ಜಿಲ್ಲಾಸ್ಪತ್ರೆ ನಿರ್ಮಾಣ ವಾಗುತ್ತಿದೆ. ಆದರೆ ಸರಕಾರಿ ವೈದ್ಯಕೀಯ ಕಾಲೇಜು ಇಲ್ಲ. ಪಿಪಿಪಿ ಮಾದರಿ ಬದಲು ಪೂರ್ಣ ಪ್ರಮಾಣದ ಸರಕಾರ ಕಾಲೇಜು ಘೋಷಣೆ ಮಾಡಬೇಕು ಎಂಬ ಆಗ್ರಹ ಜನತೆಯದು.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.