ನಾವೀನ್ಯ ಶ್ರೇಯಾಂಕದಲ್ಲಿ ಮಿಂಚಿದ ರಾಜ್ಯದ ಸಂಸ್ಥೆಗಳು

6ನೇ ಸ್ಥಾನದಲ್ಲಿ ಬೆಂಗಳೂರಿನ ಐಐಎಸ್‌ಸಿ | ಖಾಸಗಿ ಕಾಲೇಜುಗಳಲ್ಲಿ ಎನ್‌ಎಮ್‌ಐಟಿ ಮತ್ತು ಎಸ್‌ಕೆಐಟಿಗೆ ಸ್ಥಾನ

Team Udayavani, Dec 30, 2021, 6:50 AM IST

ನಾವೀನ್ಯ ಶ್ರೇಯಾಂಕದಲ್ಲಿ ಮಿಂಚಿದ ರಾಜ್ಯದ ಸಂಸ್ಥೆಗಳು

ಹೊಸದಿಲ್ಲಿ: ದೇಶದ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ನಾವೀನ್ಯತೆ (ಇನೋ ವೇಷನ್‌) ಮತ್ತು ಉದ್ಯಮಶೀಲತೆ ಅಭಿವೃದ್ಧಿಗೆ ಸಹಕಾರದ ಆಧಾರದ ಮೇಲೆ ಅಟಲ್‌ ಇನೋವೇಷನ್‌ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗುವ ಈ ರ್‍ಯಾಂಕಿಂಗ್‌ ಪಟ್ಟಿಯ ಕೇಂದ್ರೀಯ ಶಿಕ್ಷಣ ಸಂಸ್ಥೆಗಳ ಪೈಕಿ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಆರನೇ ರ್‍ಯಾಂಕ್‌ ಪಡೆದುಕೊಂಡಿದೆ. ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆ ಗೆ ಐಐಟಿ ಮದ್ರಾಸ್‌ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಟಾಪ್‌ 10ರಲ್ಲಿ ಐಐಟಿ ಬಾಂಬೆ, ದೆಹಲಿ, ಕಾನ್ಪುರವೂ ಸ್ಥಾನ ಪಡೆದಿವೆ. ಬ್ಯಾಂಡ್‌ ಎಕ್ಸಲೆಂಟ್‌ ವಿಭಾಗದಲ್ಲಿ ಸುರತ್ಕಲ್‌ನಲ್ಲಿರುವ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸ್ಥಾನ ಪಡೆದಿದೆ. ಸರಕಾರಿ ಅಥವಾ ಸರಕಾರಿ ಸ್ವಾಮ್ಯದ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪೈಕಿ ಪಂಜಾಬ್‌ ಮೊದಲ ರ್‍ಯಾಂಕ್‌ ಪಡೆದು ಕೊಂಡಿದೆ. ಈ ವಿಭಾಗದ ಬ್ಯಾಂಡ್‌ ಪ್ರಾಮಿಸಿಂಗ್‌ ವಿಶ್ವವಿದ್ಯಾನಿಲಯಗಳಲ್ಲಿ ಬೆಳಗಾವಿಯ ವಿಶ್ವೇಶ್ವ ರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು) ಸ್ಥಾನ ಪಡೆದಿದೆ.

ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಪ್ರಶಸ್ತಿ: ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಂತ್ರಿಕ ವಿಶ್ವವಿದ್ಯಾನಿಲಯವಾಗಿ ಒಡಿ ಶಾದ ಖೋರ್ದಾದ ಕಳಿಂಗ್‌ ಇನ್‌ಸ್ಟಿಟ್ಯೂಟ್‌ ಹೊರ ಹೊಮ್ಮಿದೆ. ವಿಭಾಗದ ಬ್ಯಾಂಡ್‌ ಪರ್ಫಾ ಮರ್‌ ಪಟ್ಟಿಯಲ್ಲಿ ಬಿಜಾಪುರದ ಬಿಎಲ್‌ಡಿಇ, ಬೆಂಗಳೂರಿನ ಎಂ.ಎಸ್‌.ರಾಮಯ್ಯ ವಿವಿ ಇದೆ. ಬ್ಯಾಂಡ್‌ ಪ್ರಾಮಿಸಿಂಗ್‌ ವಿವಿಗಳಲ್ಲಿ ಬೆಂಗಳೂರಿನ ದಯಾನಂದ ಸಾಗರ ಇನ್‌ಸ್ಟಿಟ್ಯೂಟ್‌, ಇಂಟರ್‌ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಇನ್‌ಫ‌ರ್ಮೇಶನ್‌ ಟೆಕ್ನಾಲಜಿ ಮತ್ತು ರೆಸಿಡೆನ್ಸಿ ವಿಶ್ವವಿದ್ಯಾನಿಲಯ ವಿದೆ. ಬ್ಯಾಂಡ್‌ ಬಿಗಿನರ್‌ ಆಗಿ ಮಂಗಳೂರಿನ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಆರ್ಕಿಟೆಕ್ಚರ್‌ ಹಾಗೂ ಕೋಲಾರದ ದೇವರಾಜ ಅರಸು ವಿವಿ ಹೊರಹೊಮ್ಮಿವೆ. .

ರಾಜ್ಯದ ಸಂಸ್ಥೆಗಳು: ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ತಾಂತ್ರಿಕ ಕಾಲೇಜುಗಳಲ್ಲಿ ನಾವೀನ್ಯತೆ ಗೆ ಪುಣೆಯ ಎಂಜಿನಿಯರಿಂಗ್‌ ಕಾಲೇಜು ಮೊದಲ ಸ್ಥಾನದಲ್ಲಿದೆ. ಅದರಲ್ಲಿ ಬ್ಯಾಂಡ್‌ ಪರ್ಫಾಮರ್‌ ಪಟ್ಟಿಗೆ ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜು, ಬೆಂಗಳೂರಿನ ಡಾ|ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ, ಹಾಸನದ ಮಲಾ°ಡ್‌ ಕಾಲೇಜ್‌ ಆಫ್ ಇಂಜಿನಿಯರಿಂಗ್‌, ಮಂಡ್ಯದ ಪಿಇಎಸ್‌ ಕಾಲೇಜ್‌ ಆಫ್ ಎಂಜಿನಿಯರಿಂಗ್‌ ಸೇರಿವೆ. ಅದೇ ವಿಭಾಗದ ಬ್ಯಾಂಡ್‌ ಪ್ರಾಮಿಸಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಡಾ|ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌, ಜ್ಯೋತಿ ನಿವಾಸ ಕಾಲೇಜು, ರಾಜೀವ್‌ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಮತ್ತು ಸರಕಾರಿ ಫಾರ್ಮಸಿ ಕಾಲೇಜು ಜತೆಯಲ್ಲಿ ಗುಲ್ಬರ್ಗದ ಪಿ.ಡಿ.ಎ ಎಂಜಿನಿಯರಿಂಗ್‌ ಕಾಲೇಜು ಸೇರಿವೆ. ವಿಭಾಗದ ಬ್ಯಾಂಡ್‌ ಬಿಗಿನರ್‌ ಕಾಲೇಜಲ್ಲಿ ನಾಗಮಂಗಲದ ಸರಕಾರಿ ಫ‌ಸ್ಟ್‌ ಗ್ರೇಡ್‌ ಕಾಲೇಜು, ಚಿತ್ರದುರ್ಗದ ಸರಕಾರಿ ವಿಜ್ಞಾನ ಕಾಲೇಜು ಕಾಣಿಸಿಕೊಂಡಿವೆ.

ನಾವೀನ್ಯತೆ  ಅಳವಡಿಸಿಕೊಂಡ ಖಾಸಗಿ ಕಾಲೇಜುಗಳಲ್ಲಿ ಬೆಂಗಳೂರಿನ ಶ್ರೀ ಕೃಷ್ಣ ಇಂಜಿನಿಯರಿಂಗ್‌ ಅಂಡ್‌ ಟೆಕ್ನಾಲಜಿ ಕಾಲೇಜಿಗೆ ನಾಲ್ಕನೇ ರ್‍ಯಾಂಕ್‌ ಹಾಗೂ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿಗೆ 5ನೇ ರ್‍ಯಾಂಕ್‌ ಸಿಕ್ಕಿದೆ. ಉಳಿದಂತೆ ಈ ವಿಭಾಗದ ಬ್ಯಾಂಡ್‌ ಎಕ್ಸಲೆಂಟ್‌, ಬ್ಯಾಂಡ್‌ ಪ್ರಾಮಿಸಿಂಗ್‌, ಬ್ಯಾಂಡ್‌ ಬಿಗಿನರ್‌, ಬ್ಯಾಂಡ್‌ ಪರ್ಫಾಮರ್‌ ಪಟ್ಟಿಯಲ್ಲಿ ಕರ್ನಾಟಕದ ಹಲವು ಕಾಲೇಜುಗಳಿವೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.