ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

Team Udayavani, Jan 20, 2022, 8:44 PM IST

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಉಡುಪಿ : ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸ್ಕಾರ್ಫ್ (ಹಿಜಾಬ್‌) ವಿವಾದಕ್ಕೆ ಸಂಬಂಧಿಸಿ ಕಳೆದ ಮೂರು ವಾರಗಳಿಂದ ತರಗತಿಯಿಂದ ಹೊರಗೆ ಉಳಿದಿರುವ ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟ್‌ ಬಳಿ ಭಿತ್ತಿಪತ್ರ ಪ್ರದರ್ಶಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಹಿಜಾಬ್‌ ನಮ್ಮ ಮೂಲಭೂತ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ನಮಗೆ ನ್ಯಾಯ ಬೇಕು ನಾವು ಹಿಜಾಬ್‌ ಹಾಕಿದ ಕಾರಣಕ್ಕಾಗಿ ತರಗತಿಯಿಂದ ಹೊರಗೆ ಕುಳಿತುಕೊಂಡಿದ್ದೇವೆ ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು. ಗುರುವಾರವೂ ಹಿಜಾಬ್‌ ಧರಿಸಿ ಕೊಂಡು ಕಾಲೇಜಿಗೆ ಬಂದ ಕಾರಣಕ್ಕೆ ತರಗತಿಗೆ ಪ್ರವೇಶ ಇಲ್ಲದೆ ಕಾಲೇಜಿನಿಂದ ಹೊರಗೆ ಉಳಿದಿದ್ದರು. ಕಳೆದ ಮೂರು ವಾರಗಳಿಂದ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಈ ರೀತಿ ಪ್ರತಿಭಟನೆ ವ್ಯಕ್ತಪಡಿಸಿದರು.

ಈ ವಿಷಯವಾಗಿ ಕುಟುಂಬದ ಸದಸ್ಯರು ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ. ಪ್ರಥಮ ಪಿಯುಸಿಯಲ್ಲಿಯೂ ಸ್ಕಾರ್ಫ್ ಹಾಕಿ ತರಗತಿಗೆ ಬಂದಿದ್ದೇವೆ. ಆಗ ಬಲತ್ಕಾರವಾಗಿ ಸ್ಕಾರ್ಫ್  ತೆಗೆಸಿದ್ದರು. ಈಗ ನಾವು ಹೋರಾಟಕ್ಕೆ ಇಳಿದ ಕಾರಣಕ್ಕೆ ನಮಗೆ ಕಿರುಕುಳ ನೀಡುತ್ತಿದ್ದಾರೆ. ನಮಗೆ ಶಿಕ್ಷಣ ಬೇಕು. ಅದರೊಂದಿಗೆ ನಮ್ಮ ಧಾರ್ಮಿಕ ಹಕ್ಕಿನಂತೆ ಸ್ಕಾರ್ಫ್ ಹಾಕಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿನಿ ಆಲಿಯಾ ಅಸದಿ ಒತ್ತಾಯಿಸಿದರು.

ನಮ್ಮ ಶಿಕ್ಷಣ ಹಾಳಾಗುತ್ತಿದೆ. ಪರೀಕ್ಷೆ ಬರುತ್ತಿದೆ. ನಮಗೆ ಹಿಜಾಬ್‌ ಹಾಕಲು ಅವಕಾಶ ಕೊಡಿ ಎಂದು ಆಲಿಯಾ ಬಾನು ಮನವಿ ಮಾಡಿದರು.

ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ತಲಾ ಮೂವರು ಹಾಗೂ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ತಲಾ ಒಬ್ಬರು ಸೇರಿದಂತೆ ಒಟ್ಟು ಎಂಟು ವಿದ್ಯಾರ್ಥಿನಿಯರು ತರಗತಿ ಪ್ರವೇಶ ಇಲ್ಲದೆ ಕಾಲೇಜಿನ ಹೊರಗಡೆ, ಸ್ಟಾಫ್ ರೂಮ್‌, ಲೈಬ್ರರಿ ಯಲ್ಲಿ ಕುಳಿತು ಮನೆಗೆ ಹೋಗುತ್ತಿದ್ದಾರೆ. ಇವರಲ್ಲಿ ಮೂವರು ಅನಾರೋಗ್ಯದ ಕಾರಣ ಕಾಲೇಜಿಗೆ ಬಂದಿಲ್ಲ. ಉಳಿದ ಐವರು ಭಿತ್ತಿಪತ್ರ ಪ್ರದರ್ಶಿಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಸಮವಸ್ತ್ರ ವಿವಾದವಾಗಿ ಪರಿಗಣಿಸಿ ಈ ಸಂಬಂಧ ಸರಕಾರಕ್ಕೆ ಬರೆದಿದ್ದೇವೆ. ವಿದ್ಯಾರ್ಥಿನಿಯರು ಒಂದುವರೆ ವರ್ಷದಿಂದ ಹಿಜಾಬ್‌ ಧರಿಸದೇ ತರಗತಿಗೆ ಹಾಜರಾಗಿದ್ದರು. ಕಾಲೇಜಿನಲ್ಲಿ ಶಿಸ್ತು ಅತಿಮುಖ್ಯ. ಸರಕಾರದ ನಿರ್ಧಾರ ಪ್ರಕಟಿಸುವವರೆಗೂ ಹಿಜಾಬ್‌ ತೆಗೆದು ತರಗತಿಗೆ ಹೋಗಬೇಕು. ಸರಕಾರ ಸಮವಸ್ತ್ರ ಬೇಡ ಎಂದರೆ, ಸಮವಸ್ತ್ರ ಯಾರಿಗೂ ಭೇಡ ಎಂಬ ನಿರ್ಧಾರ ತೆಗೆದುಕೊಳ್ಳಲು ಕಾಲೇಜು ಅಭಿವೃದ್ಧಿ ಸಮಿತಿ ನಿಶ್ಚಯಿಸಿದೆ.
-ಕೆ.ರಘುಪತಿ ಭಟ್‌, ಸ್ಥಳೀಯ ಶಾಸಕ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.