ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
Team Udayavani, Dec 19, 2020, 11:04 PM IST
ಸುಳ್ಯ: ಮಗನಿಂದ ಬಿದಿರಿನ ಸಲಾಕೆಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡರು ಆಸ್ಪತ್ರೆಯ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ವರದಿಯಾಗಿದೆ.
ಅಪ್ಪ – ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು ಆ ಸಂದರ್ಭ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿ.18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ಸಂದರ್ಭದಲ್ಲಿ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ, ಈ ವೇಳೆ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ ಗೌಡರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇತ್ತೀಚಿಗೆ ಮಗ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವಿಜಯಪುರದಲ್ಲಿ ಕಂದಾಯ ಅಧಿಕಾರಿಗಳ ದಿಢೀರ್ ದಾಳಿ: ಭೀಮಾನದಿ ಪಾತ್ರದಲ್ಲಿ ಅನಧಿಕೃತ ಮರಳು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ