ಲಾಕ್ ಡೌನ್ ಸಮಯದಲ್ಲಿ ವೇತನ ನೀಡದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ : ಸುಪ್ರೀಂ
Team Udayavani, Jun 12, 2020, 1:00 PM IST
ನವದೆಹಲಿ ; ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಕಾರ್ಮಿಕರಿಗೆ ವೇತನವನ್ನು ನೀಡದ ಕಂಪೆನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಲಾಕ್ ಡೌನ್ ಅವಧಿಯಲ್ಲಿ ಕೇಂದ್ರ ಸರಕಾರ ಕಂಪೆನಿ ಕೆಲಸಗಾರರಿಗೆ ಕಡ್ಡಾಯವಾಗಿ ಸಂಪೂರ್ಣ ವೇತನ ನೀಡಬೇಕೆಂದು ಮಾರ್ಚ್ 29 ರಂದು ಹೊರಡಿಸಿದ ಆದೇಶದ ಕುರಿತಾಗಿ ವಿವರಣೆ ನೀಡಲು ನಾಲ್ಕು ವಾರಗಳ ಕಾಲಾವಕಾಶ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರಕಾರ ಕಂಪೆನಿಗಳ ವಿರುದ್ಧ ಜುಲೈ ತಿಂಗಳ ಅಂತ್ಯದವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ಆದೇಶಿಸಿ ತೀರ್ಪು ನೀಡಿದ್ದು ಇದರಿಂದ ಕಂಪೆನಿಯ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.
ಕೇಂದ್ರ ಸರಕಾರದ ಆದೇಶದ ವಿರುದ್ಧ ಸಣ್ಣ ಕೈಗಾರಿಕೆಗಳ ಸಂಘಟಕರು ನ್ಯಾಯಾಲಯದ ಮೆಟ್ಟಿಲೇರಿದ್ದರು ಇದಕ್ಕೆ ಪ್ರತಿಯಾಗಿ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ