ಅನರ್ಹ ಶಾಸಕರಿಗೆ ಮತ್ತಷ್ಟು ಸಂಕಷ್ಟ; ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂ ನಕಾರ

Team Udayavani, Nov 8, 2019, 11:05 AM IST

ನವದೆಹಲಿ: ಅನರ್ಹ ಶಾಸಕರ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶುಕ್ರವಾರ ನಿರಾಕರಿಸಿದೆ.

ಶುಕ್ರವಾರ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು, ತೀರ್ಪು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಚುನಾವಣೆ ಮುಂದೂಡುವಂತೆ ಕೋರಿದ್ದರು. ಆದರೆ ಉಪ ಚುನಾವಣೆ ಮುಂದೂಡಲು ನಿರ್ದೇಶನ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ನ ನ್ಯಾ.ರಮಣ್ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ.

ನವೆಂಬರ್ 11ರಿಂದ ಉಪಚುನಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿ ಉಪಚುನಾವಣೆ ಮುಂದೂಡಬೇಕು. ಇದಕ್ಕಾಗಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬೇಕು ಎಂದು ರೋಹ್ಟಗಿ ಮನವಿ ಮಾಡಿಕೊಂಡರು.

ಆದರೆ ಉಪಚುನಾವಣೆ ಮುಂದೂಡಿಕೆ ಕುರಿತ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಲಿಸ್ಟ್ ಮಾಡಲು ಒಪ್ಪಿದ ನ್ಯಾ.ರಮಣ್, ಚುನಾವಣಾ ಆಯೋಗಕ್ಕೆ ಚುನಾವಣೆ ಮುಂದೂಡುವಂತೆ ನಿರ್ದೇಶಿಸಲ್ಲ ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ