ಚೀನಾಕ್ಕೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಶಕ್ತವಾಗಿದೆ : ಸಚಿವ ಸುರೇಶ್ ಅಂಗಡಿ
Team Udayavani, Jun 17, 2020, 3:40 PM IST
ಬೆಳಗಾವಿ: ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ನರಿ ಬುದ್ದಿ ತೋರಿಸುತ್ತಿರುವ ಚೀನಾಕ್ಕೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಶಕ್ತವಾಗಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚೀನಾಗೆ ಎಚ್ಚರಿಕೆ ನೀಡಿದರು.
ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗ ಎಲ್ಲ ಕಡೆ ಸಂಕಷ್ಟದ ಸಮಯ ಇದೆ. ಹೀಗಿರುವಾಗ ಚೀನಾ ತನ್ನ ನರಿ ಬುದ್ಧಿ ಬಿಡಬೇಕು ಎಂದರು. ಚೀನಾದ ಯೋಧರ ಜೊತೆ ನಡೆದ ಸಂಘರ್ಷದಲ್ಲಿ ಭಾರತಕ್ಕಾಗಿ ಪ್ರಾಣಕೊಟ್ಟು ಹುತಾತ್ಮರಾದ ಸೈನಿಕರಿಗೆ ಚೀರಶಾಂತಿ ಸಿಗಲಿ. ಈ ಸೈನಿಕರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸುರೇಶ ಅಂಗಡಿ ಮೃತಯೋಧರಿಗೆ ಶೃದ್ದಾಂಜಲಿ ಅರ್ಪಿಸಿದರು.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಭಾರತೀಯ ಸೈನ್ಯ ಸನ್ನದವಾಗಿದೆ. ಪ್ರಧಾನಿ ಮೋದಿ, ಗೃಹಮಂತ್ರಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಸಂಬಂಧ ಸಭೆ ಸಹ ನಡೆಸಿದ್ದಾರೆ. ಎಂಥದೆ ಪರಿಸ್ಥಿತಿ ಬಂದರೂ ಅದನ್ನು ಇಲ್ಲಿ ಅತ್ಯಂತ ಸಮರ್ಥವಾಗಿ ಎದುರಿಸುತ್ತೇವೆ ಎಂದು ಸಚಿವ ಸುರೇಶ ಅಂಗಡಿ ಹೇಳಿದರು.
ಯುದ್ದ ಮಾಡುವ ಪರಿಸ್ಥಿತಿ ಬಂದಾಗ ಭಾರತ ಅದಕ್ಕೆ ಸನ್ನದ್ದವಾಗಿದೆ. 1962 ರ ಪರಿಸ್ಥಿತಿ ಬೇರೆ ಇವತ್ತಿನ ಪರಿಸ್ಥಿತಿ ಬೇರೆ ಇದೆ. 130ಕೋಟಿ ಜನರು ನಮ್ಮ ಸೈನಿಕರ ಹಿಂದೆ ಇದ್ದಾರೆ ಎಂದರು.
ಲಡಾಕ್ ಗೆ ರೈಲು ಸಂಚಾರ ಸ್ಥಗಿತಗೊಳಿಸುವ ಬಗ್ಗೆ ಚರ್ಚೆ ನಡೆದಿದ್ದು ಆದಷ್ಟು ಬೇಗ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?