ಮೆಟ್ರೋ ನಿಲ್ದಾಣದಲ್ಲಿ ಶಂಕಿತ ಉಗ್ರ?; ತಪಾಸಣೆ ವೇಳೆ ಪರಾರಿ !

Team Udayavani, May 7, 2019, 3:21 PM IST

ಬೆಂಗಳೂರು: ನಗರದ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ಸಂಜೆ 7.30 ರ ವೇಳೆಗೆ ಆಗಂತುಕನೊಬ್ಬ ತಪಾಸಣೆ ವೇಳೆ ಪರಾರಿಯಾಗಿರುವ ಘಟನೆ ನಡೆದಿದ್ದು,ಆತಂಕಕ್ಕೆ ಕಾರಣವಾಗಿದೆ.

ಶಂಕಿತ ವ್ಯಕ್ತಿಯನ್ನು ಭದ್ರತಾ ಸಿಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸೊಂಟದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಸೆನ್ಸಾರ್‌ ಅಲರ್ಟ್‌ ಆಗಿದೆ. ಆತನನ್ನು ಪಕ್ಕಕ್ಕೆ ನಿಲ್ಲಿಸಿ ಹೆಚ್ಚುವರಿ ಭದ್ರತಾ ಸಿಬಂದಿಯನ್ನುಕರೆಯಲು ಮುಂದಾದಾಗ ಆತ ಗೇಟ್‌ ಹಾರಿ ಪರಾರಿಯಾಗಿದ್ದಾನೆ.

ಘಟನೆ ಬಳಿಕ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ತಪಾಸಣೆಯನ್ನೂ ಸೂಕ್ಷ್ಮವಾಗಿ ಮಾಡಲಾಗುತ್ತಿದೆ.

ಪೊಲೀಸ್‌ ಅಧಿಕಾರಿಗಳು ಹೆಚ್ಚುವರಿ ಸಿಬಂದಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಿದ್ದಾರೆ.

ಜುಬ್ಟಾ,ಪೈಜಾಮ ಧರಿಸಿ ಬಂದಿದ್ದ ವ್ಯಕ್ತಿಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ