ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಣ; ಮೂವರು ಬಾಲಕರ ಬಂಧನ

ಪ್ರಿಯತಮನ ಜೊತೆಗಿರುವ ಫೋಟೋವನ್ನು ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ.

Team Udayavani, Jul 9, 2022, 11:50 AM IST

ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಣ; ಮೂವರು ಬಾಲಕರ ಬಂಧನ

ಚೆನ್ನೈ: ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹತ್ತನೆ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಅಮರನಾಥ ಯಾತ್ರೆಗೆ ತೆರಳಿದ ರಾಜ್ಯದ ಎಲ್ಲರೂ ಸುರಕ್ಷಿತವಾಗಿದ್ದಾರೆ: ಸಿಎಂ ಬೊಮ್ಮಾಯಿ

ಅತ್ಯಾಚಾರ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರ ವಿದ್ಯಾರ್ಥಿಗಳ ಜೊತೆ ಆರೋಪಿಗಳು ಶೇರ್ ಮಾಡಿರುವುದಾಗಿ ವರದಿ ತಿಳಿಸಿದೆ. ಆರೋಪಿತ ಮೂವರು ಅಪ್ರಾಪ್ತ ವಿದ್ಯಾರ್ಥಿಗಳು ಕಡಲೂರು ಜಿಲ್ಲೆಯವರಾಗಿದ್ದಾರೆ. ಥಿಟ್ಟಾಕುಡಿ ಪೊಲೀಸ್ ಇನ್ಸ್ ಪೆಕ್ಟರ್ ಕೃಪಾ ಅವರು ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆಕೆಯ ಪ್ರಿಯತಮನ ಜೊತೆಗಿರುವ ಫೋಟೋವನ್ನು ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಹಿರಿಯ ವಿದ್ಯಾರ್ಥಿಯೊಬ್ಬನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತನ ಮನೆಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಆರೋಪಿಗಳಲ್ಲಿ ಒಬ್ಬ ವಿದ್ಯಾರ್ಥಿ, ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಒಟ್ಟಿಗೆ ನಿಂತಿರುವ ಪೋಟೋ ಸೆರೆ ಹಿಡಿದಿದ್ದ. ನಂತರ ಈ ಫೋಟೊವನ್ನು ಆಕೆಗೆ ತೋರಿಸಿ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದರು ಎಂದು ವರದಿ ವಿವರಿಸಿದೆ.

ಬ್ಲ್ಯಾಕ್ ಮೇಲ್ ನಿಂದ ವಿದ್ಯಾರ್ಥಿನಿ ಮಧ್ಯಾಹ್ನದ ಊಟದ ಸಮಯದಲ್ಲಿ ಶಾಲೆಯ ಹಿಂಭಾಗದಲ್ಲಿರುವ ಸಹಪಾಠಿ ವಿದ್ಯಾರ್ಥಿಯ ಮನೆಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಮೂವರು ಸಹಪಾಠಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದರಲ್ಲಿ ಒಬ್ಬಾತ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಚಾರ ಘಟನೆ ಬಗ್ಗೆ ಸಂತ್ರಸ್ತ ಬಾಲಕಿ ತಾಯಿ ಬಳಿ ಎಲ್ಲಾ ವಿಚಾರವನ್ನು ತಿಳಿಸಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.