ತಮಿಳುನಾಡು: ಬಾಲಕನನ್ನು ವಿವಾಹವಾಗಿ ಗರ್ಭಿಣಿಯಾದ ವಿದ್ಯಾರ್ಥಿನಿ ಬಂಧನ
ಅಪ್ರಾಪ್ತ ವಿದ್ಯಾರ್ಥಿ ಯುವತಿ ಜೊತೆ ವಾಸವಾಗಿರುವುದು ಪತ್ತೆಯಾಗಿತ್ತು
Team Udayavani, Oct 12, 2022, 4:38 PM IST
ಚೆನ್ನೈ: ಅಪ್ರಾಪ್ತನ ಜೊತೆ ವಿವಾಹವಾಗಿ ಗರ್ಭಿಣಿಯಾಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ತಮಿಳುನಾಡಿನ ಸೇಲಂ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ : ಪ್ರತಾಪ್ ಸಿಂಹ
ಅಪ್ರಾಪ್ತ ವಿದ್ಯಾರ್ಥಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ನಾಪತ್ತೆಯಾಗಿದ್ದ. ಈ ಬಗ್ಗೆ ಪೋಷಕರು ಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿ ಯುವತಿ ಜೊತೆ ವಾಸವಾಗಿರುವುದು ಪತ್ತೆಯಾಗಿತ್ತು ಎಂದು ವರದಿ ವಿವರಿಸಿದೆ.
ಯುವತಿಯನ್ನು ವೈದ್ಯಕೀಯ ತಪಾಸಣೆಗಾಗಿ ಕಳುಹಿಸಲಾಗಿದ್ದು, ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುವತಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಸೇಲಂ ನಗರ ಪೊಲೀಸ್ ಕಮಿಷನರ್ ನಜ್ಮುಲ್ ಹೂಡಾ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣ ದಾಖಲು:
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲೂ ಇದೇ ರೀತಿ ಘಟನೆ ನಡೆದಿದ್ದು, 17 ವರ್ಷದ ಹುಡುಗನೊಬ್ಬ, 16 ವರ್ಷದ ಬಾಲಕಿ ಜೊತೆ ವಿವಾಹವಾಗಿದ್ದ. ಬಸ್ ನಿಲ್ದಾಣದಲ್ಲಿ ಹುಡುಗ ಬಾಲಕಿಯ ಕೊರಳಿಗೆ ಮಂಗಲಸೂತ್ರ ಕಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಳಿಕ ಪ್ರಕರಣದ ಬಗ್ಗೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ