ಹತ್ತು ಸಾವಿರ ವಿದ್ಯುತ್‌ ಚಾಲಿತ ಬಸ್‌ ರಸ್ತೆಗಿಳಿಸಲು ಕೇಂದ್ರ ಸರ್ಕಾರ ನಿರ್ಧಾರ

Team Udayavani, Jan 25, 2020, 10:21 PM IST

250120kpn89

ಬೆಂಗಳೂರು: ಈ ವರ್ಷದ ಒಳಗೆ ದೇಶಾದ್ಯಂತ ಹತ್ತು ಸಾವಿರ ವಿದ್ಯುತ್‌ಚಾಲಿತ ಬಸ್‌ಗಳನ್ನು ರಸ್ತೆಗಿಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಆರ್ಥಿಕ ಉಳಿತಾಯ ಹಾಗೂ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ “ಪರಿಸರ ಸ್ನೇಹಿ’ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹತ್ತು ಸಾವಿರ ಎಲೆಕ್ಟ್ರಿಕ್‌ ಬಸ್‌ಗಳನ್ನು ನಿರೀಕ್ಷಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು.

ನಗರದ ಹೋಟೆಲ್‌ ಐಟಿಸಿ ಗಾಡೇìನಿಯಾದಲ್ಲಿ ಶನಿವಾರ ಪ್ರತಿಷ್ಠಿತ ಟಿವಿಎಸ್‌ ಮೋಟಾರ್‌ ಕಂಪೆನಿ ಹೊರತಂದ ಮೊದಲ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪೆಟ್ರೋಲ್‌ ದರ ಲೀ. 80 ರೂ. ಇದ್ದರೆ, ಡೀಸೆಲ್‌ ದರ 71 ರೂ. ಮತ್ತು ಎಥೆನಾಲ್‌ 55 ರೂ. ಇದೆ. ಹೀಗಿರುವಾಗ, 10-12 ರೂ.ಗೆ ಸಿಗುವ ವಿದ್ಯುತ್‌ಚಾಲಿತ ವಾಹನಗಳು ಉತ್ತಮ. ದೇಶದಲ್ಲಿ ಇಂದು ವಿದ್ಯುತ್‌ ಲಭ್ಯತೆ ಕೂಡ ಹೆಚ್ಚುವರಿಯಾಗಿದೆ. ಆದ್ದರಿಂದ ಈ ಮಾದರಿಯ ಬಸ್‌ಗಳನ್ನು ರಸ್ತೆಗಿಳಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಪೂರಕವಾಗಿ ಹೆದ್ದಾರಿಗಳಲ್ಲಿ ಪೆಟ್ರೋಲ್‌ ಬಂಕ್‌ಗಳ ಸಮೀಪದಲ್ಲೇ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ತೆರೆಯುವ ಸಂಬಂಧ ನೀತಿಯನ್ನು ರೂಪಿಸಲಾಗಿದೆ.

ಯುದ್ಧವಿಮಾನಗಳಲ್ಲಿ ಕೂಡ ಜೈವಿಕ ಇಂಧನ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು.

2024ರ ಗಣರಾಜ್ಯೋತ್ಸವಕ್ಕೆ ಇ-ಹೆದ್ದಾರಿ ಸಿದ್ಧ

ಜತೆಗೆ ರಾಜಧಾನಿ ದೆಹಲಿ-ಮುಂಬೈ ನಡುವೆ “ಎಲೆಕ್ಟ್ರಿಕ್‌ ಹೆದ್ದಾರಿ’ಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು, 1,300 ಕಿ.ಮೀ. ಉದ್ದದ 12 ಪಥದ ಈ ರಸ್ತೆಯು 1.30 ಲಕ್ಷ ಕೋಟಿ ವೆಚ್ಚದಲ್ಲಿ ತಲೆಯೆತ್ತಲಿದೆ. ಈ ಸಂಬಂಧದ ಶೇ. 60ರಷ್ಟು ಟೆಂಡರ್‌ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. 2024ರ ಜ. 26ಕ್ಕೆ ಇದು ಲೋಕಾರ್ಪಣೆಗೊಳ್ಳಲಿದೆ. ಈ “ಹಸಿರು ಕಾರಿಡಾರ್‌’ನಲ್ಲಿ ಮಾರ್ಗದುದ್ದಕ್ಕೂ ವಿದ್ಯುತ್‌ಚಾಲಿತ ವಾಹನಗಳಿಗೆ ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. ಇದಕ್ಕಾಗಿ ಅತ್ಯಂತ ಕಡಿಮೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದಲ್ಲದೆ, ನಾಗ್ಪುರದಲ್ಲಿ ಒಳಚರಂಡಿ ನೀರನ್ನು ಇಂಧನವನ್ನಾಗಿ ಪರಿವರ್ತಿಸಲಾಗುತ್ತಿದೆ. ಹೀಗೆ ಉತ್ಪಾದಿಸಿದ ಇಂಧನವನ್ನು ಬಳಸಿ ನೂರು ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ದೇಶದಲ್ಲೇ ಈ ಪ್ರಯೋಗ ಇದೇ ಮೊದಲು ಎಂದ ಅವರು, ಇಂತಹ ಹಲವು ಪ್ರಯತ್ನಗಳು ಭವಿಷ್ಯದಲ್ಲಿ ದೇಶದ ಆರ್ಥಿಕತೆಯ ಐತಿಹಾಸಿಕ ಬದಲಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಒಂದು ಕೋಟಿಗಿಂತ ಹೆಚ್ಚು ಜನ ಉದ್ಯಾನ ನಗರಿಯಲ್ಲಿ ವಾಸಿಸುತ್ತಿದ್ದು, 50 ಲಕ್ಷ ಮಂದಿ ದ್ವಿಚಕ್ರ ವಾಹನ ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಬಹುತೇಕ ಯುವಕರು ಆಗಿದ್ದಾರೆ. ನಗರದಾದ್ಯಂತ ಸುಮಾರು ನೂರು ಚಾರ್ಜಿಂಗ್‌ ಸ್ಟೇಷನ್‌ಗಳು ಸೇರಿದಂತೆ ವಿದ್ಯುತ್‌ಚಾಲಿತ ವಾಹನಗಳಿಗೆ ಮೂಲಸೌಕರ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಟಿವಿಎಸ್‌ ಮೋಟಾರ್‌ ಕಂಪೆನಿ ಅಧ್ಯಕ್ಷ ವೇಣು ಶ್ರೀನಿವಾಸನ್‌ ಉಪಸ್ಥಿತರಿದ್ದರು.

ಟಿವಿಎಸ್‌ ಐಕ್ಯೂಬ್‌ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನವು 4.4 ಕಿ.ವಾ. ಸಾಮರ್ಥ್ಯದ್ದಾಗಿದೆ. ಸಂಪೂರ್ಣ ಚಾರ್ಜ್‌ ಮಾಡಿದರೆ, ಗಂಟೆಗೆ ಗರಿಷ್ಠ 75 ಕಿ.ಮೀ. ವೇಗದಲ್ಲಿ ಇದು ಸಂಚರಿಸಬಲ್ಲದು. ಸದ್ಯ ಬಿಳಿ ಬಣ್ಣದಲ್ಲಿ ಇದು ಲಭ್ಯವಿದ್ದು, ರಿಮೋಟ್‌ ಚಾರ್ಜ್‌ ಸ್ಥಿತಿ, ಅಧಿಕ ವೇಗದ ಎಚ್ಚರಿಕೆ, ಬ್ಯಾಟರಿ ಚಾರ್ಜ್‌ ಬಗ್ಗೆ ಮುನ್ಸೂಚನೆ, ಜಿಯೊ ಫೆನ್ಸಿಂಗ್‌ ಸೇರಿದಂತೆ ಹಲವು ವಿಶೇಷತೆಗಳನ್ನು ಇದು ಒಳಗೊಂಡಿದೆ. ಇದರ ಬೆಲೆ 1.15 ಲಕ್ಷ ರೂ. ಎಂದು ವೇಣು ಶ್ರೀನಿವಾಸನ್‌ ವಿವರಿಸಿದರು. ಇದೇ ವೇಳೆ ಸ್ಮಾರ್ಟ್‌ ಹೋಂ ಚಾರ್ಜಿಂಗ್‌ ಯೂನಿಟ್‌ ಕೂಡ ಉದ್ಘಾಟನೆಗೊಂಡಿತು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.