ಕೇಂದ್ರ ಸರಕಾರ ರಾಜ್ಯದ ನೆರೆ ಹಾನಿಯ ಸಾಕ್ಷಿ ಕೇಳುತ್ತಿದೆ

Team Udayavani, Oct 4, 2019, 12:17 PM IST

ಬೆಂಗಳೂರು: ರಾಜ್ಯ ಸರಕಾರ ಕಳುಹಿಸಿರುವ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಹಾನಿ ಅಂದಾಜಿನ ಸಾಕ್ಷಿಯನ್ನು ಕೇಂದ್ರ ಕೇಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ಎನ್ ಡಿಆರ್ ಎಫ್ ನಾರ್ಮ್ಸ್ ಅನ್ನು ನಾವು ಕೇಳಿದ್ದೇವೆ. ಅದನ್ನೇ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ರಾಷ್ಟ್ರೀಯ ವಿಪತ್ತು ನೆರವು ಇನ್ನೆಲ್ಲಿ ನೀಡಲಿದೆ ಎಂದರು.

2009ರಲ್ಲಿ ಪ್ರವಾಹ ಆದಾಗ ಪ್ರಧಾನಿ ಮನಮೋಹನ್ ಸಿಂಗ್ ಬಂದಿದ್ದರು. ಸಮೀಕ್ಷೆ ಮಾಡಿ 1600 ಕೋಟಿ ಬಿಡುಗಡೆ ಮಾಡಿದ್ದರು. ಅಂದಿನ ಪ್ರವಾಹಕ್ಕಿಂತ ಇಂದು ಹೆಚ್ಚಿನ ಹಾನಿಯಾಗಿದೆ. ಸಂತ್ರಸ್ಥರ ಬದುಕು ಬೀದಿಗೆ ಬಿದ್ದಿದೆ. ಮನೆ ಮಠಗಳಿಲ್ಲ,ಶಾಲಾ ಕೊಠಡಿಗಳು ಇಲ್ಲ. ಈ ಪರಿಸ್ಥಿತಿ ಬಗ್ಗೆ ವರದಿಯನ್ನೂ ಸರಿಯಾಗಿ ಕಳಿಸಿಲ್ಲ ಎಮದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.

ರಾಜ್ಯದ 25 ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ, ಬಸವನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆಗಳನ್ನು ಅಭಿನಂದಿಸಬೇಕು. ಅವರು ಯಾವ ಪಕ್ಷದವರೇ ಆಗಿರಲಿ. ಇಂತ ಸಂದರ್ಭದಲ್ಲಿ ಗಟ್ಟಿ ಧ್ವನಿ ಎತ್ತಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...