ಬೇಡಿಕೆ ಈಡೇರಿಕೆಗಾಗಿ ಮುಖ್ಯಮಂತ್ರಿ ಭೇಟಿಯಾದ ದೊರೆಸ್ವಾಮಿ
Team Udayavani, Aug 28, 2019, 8:20 PM IST
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಎಚ್.ಎಸ್. ದೊರೆಸ್ವಾಮಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.
ಅವರ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಸಲಹೆಗಾರರಾದ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ, ಇವರು ಉಪಸ್ಥಿತರಿದ್ದರು.