ಡಿಕೆಶಿ ವಿಚಾರಣೆ ನಾಳೆ 11 ಗಂಟೆಗೆ ಮತ್ತೆ ಮುಂದುವರಿಕೆ
Team Udayavani, Aug 30, 2019, 11:57 PM IST
ಬೆಂಗಳೂರು :ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸಂಜೆ 6.30 ರಿಂದ ತಡರಾತ್ರಿ 11.30ರ ವರೆಗೆ ವಿಚಾರಣೆ ನಡೆಸಿ ನಾಳೆ ಮತ್ತೆ 11 ಗಂಟೆಗೆ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ದಿಲ್ಲಿಯ ಮನೆಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ
ಡಿಕೆಶಿ ಅವರನ್ನು ಶುಕ್ರವಾರ ಸಂಜೆಯಿಂದ ಇಡಿ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆಗಳನ್ನು ನಡೆಸಿದ್ದರು.
ವಿಚಾರಣೆಗೆ ಸಹಕರಿಸುತ್ತೇನೆ :
ಇಡಿ ಅಧಿಕಾರಿಗಳ ಸತತ ವಿಚಾರಣೆಯ ಬಳಿಕ ಮಾತನಾಡಿದ ಡಿ. ಕೆ. ಶಿವಕುಮಾರ್ ನಾಳೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ, ನಾಳೆಯ ವಿಚಾರಣೆಗೆ ನಾನು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆ ಎಂದು ಹೇಳಿ ಕರ್ನಾಟಕ ಭವನಕ್ಕೆ ತೆರಳಿದರು.
ಶುಕ್ರವಾರದ ಬೆಳವಣಿಗೆ :
ಇತ್ತ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಶುಕ್ರವಾರ ಸಂಜೆ ವೇಳೆಗೆ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ದಿಲ್ಲಿಯ ಮನೆಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶುಕ್ರವಾರ ತಡರಾತ್ರಿಯವರೆಗೂ ವಿಚಾರಣೆ ನಡೆಸಿದರು.ಇಡಿ ಅಧಿಕಾರಿಗಳ ಮುಂದೆ ಹಾಜರಾಗಲು ಅಪರಾಹ್ನ 1 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದಿಲ್ಲಿಗೆ ತೆರಳಿದ ಡಿ.ಕೆ. ಶಿವಕುಮಾರ್, ಸಂಜೆ 6.30ರ ಸುಮಾರಿಗೆ ದಿಲ್ಲಿಯ ಲೋಕನಾಯಕ ಭವನದಲ್ಲಿರುವ ಇ.ಡಿ ಕೇಂದ್ರ ಕಚೇರಿಗೆ ತಮ್ಮ ಕೆಲ ಬೆಂಬಲಿಗರು ಹಾಗೂ ಆಪ್ತರೊಂದಿಗೆ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ