ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ


Team Udayavani, Dec 16, 2022, 12:03 PM IST

8

ಬೆಂಗಳೂರು: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅವರು ಇಂದು ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಇಂದು ಉದ್ಘಾಟಿಸಿ ಮಾತನಾಡಿದರು.

ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ.

ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿ ಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದು ಎಂದರು.

ಮನದಾಳದ ನಮನ

ಮಾನವನ ಹೊಂದಾಣಿಕೆಯ ಗುಣ ಅತ್ಯಂತ ಶ್ರೇಷ್ಠವಾದುದು. ಪ್ರತಿಕೂಲ ವಾತಾವರಣದಲ್ಲಿಯೂ ಬದುಕಿ, ಸೈನಿಕರು ಹೋರಾಡುತ್ತಾರೆ. ದೇಶವನ್ನು ವಿಜಯಪಥದತ್ತ ನಡೆಸಿ, ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಎಲ್ಲ ಯೋಧರಿಗೂ ಮನದಾಳದ ನಮನ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅವರ ಅಪ್ರತಿಮ ತ್ಯಾಗ ದೇಶಕ್ಕೆ ವಿಜಯ ತಂದು ಸುರಕ್ಷಿತವಾಗಿ ಇಟ್ಟಿದೆ. ಸಾಮಾನ್ಯ ನಾಗರಿಕರು ಶಾಂತಿಯಿಂದಿರಲು ಸಾಧ್ಯವಾಗಿದೆ ಎಂದರು.

ಸನ್ನದ್ಧತೆ

ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು ಎಂದರು.

ನಾಯಕತ್ವ

ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದರು.

ರಕ್ಷಣಾ ಪಡೆಗಳಿಂದಾಗಿ ನಮ್ಮ ದೇಶ ಸುರಕ್ಷಿತವಾಗಿದ್ದು, ನಾವು ಪ್ರಗತಿಯತ್ತ ಸಾಗಬೇಕು. ನಾಗರಿಕರಾಗಿ ದೇಶವಾಸಿಗಳಿಗೆ ಉತ್ತಮ ಜೀವನ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ. ಶಶಿಧರ್, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.