ಪೊಲೀಸರಿಗೆ ಪರಿಷ್ಕೃತ ಸಂಬಳ ಈ ತಿಂಗಳಿನಿಂದಲೇ ಜಾರಿ
ಸರಕಾರದಿಂದ ಮತ್ತೂಂದು ಸುತ್ತೋಲೆ
Team Udayavani, Sep 19, 2019, 6:00 AM IST
ಬೆಂಗಳೂರು: ಬಹು ಸಮಯದಿಂದ ಒಂದಲ್ಲ ಒಂದು ಕಾರಣಕ್ಕೆ ಮುಂದೂಡಲ್ಪಡುತ್ತಿದ್ದ ಪೊಲೀಸ್ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಔರಾದ್ಕರ್ ವರದಿ 2-3 ದಿನಗಳೊಳಗೆ ಜಾರಿಯಾಗುವ ಸಾಧ್ಯತೆ ಇದೆ. ಸೆಪ್ಟಂಬರ್ ತಿಂಗಳ ವೇತನದಲ್ಲೇ ಪರಿಷ್ಕೃತ ವೇತನ ಪೊಲೀಸರ ಕೈ ಸೇರಲಿದೆ.
ಈ ಕುರಿತ ಆದೇಶವನ್ನು ತಾತ್ಕಾಲಿಕ ವಾಗಿ ತಡೆ ಹಿಡಿಯಲಾಗಿದೆ ಎಂದು ಮಂಗಳವಾರವಷ್ಟೇ ಸುತ್ತೋಲೆ ಹೊರಡಿಸಿದ್ದ ಪೊಲೀಸ್ ಇಲಾಖೆ, ಈಗ 2-3 ದಿನಗಳೊಳಗಾಗಿ ಅದನ್ನು ಇತ್ಯರ್ಥ ಪಡಿಸಲಾಗುವುದು ಎಂದು ಮತ್ತೂಂದು ಸುತ್ತೋಲೆ ಹೊರಡಿಸಿದೆ.
ಲೆಕ್ಕಾಚಾರದಲ್ಲಿ ವ್ಯತ್ಯಾಸ, ತಾಂತ್ರಿಕ ಕಾರಣಗಳಿಂದ ವೇತನ ಪರಿಷ್ಕರಣೆ ಬಗ್ಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಈ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಯಾಗಿತ್ತು.
ಅಗ್ನಿಶಾಮಕ ಸೇವೆಗೂ ವಿಸ್ತರಣೆ
ವೇತನ ಪರಿಷ್ಕರಣೆಯನ್ನು ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ವಿಸ್ತರಿಸಲು ಸಂಪುಟ ಸಭೆ ತೀರ್ಮಾನಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಈಗಾಗಲೇ ಪೊಲೀಸ್ ಇಲಾಖೆ ನೌಕರರ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ಅನ್ವಯಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆ ಹಿಡಿದಿರಬಹುದು. ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ವೇತನ ಪರಿಷ್ಕರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ