Udayavni Special

ಪಂಚಾಯತ್‌ ಅಧ್ಯಕ್ಷರ ಅವಧಿ 30 ತಿಂಗಳು

Team Udayavani, Mar 25, 2020, 6:30 AM IST

ಪಂಚಾಯತ್‌ ಅಧ್ಯಕ್ಷರ ಅವಧಿ 30 ತಿಂಗಳು

ಬೆಂಗಳೂರು: ಗ್ರಾಮ ಪಂಚಾಯತ್‌, ತಾ.ಪಂ. ಮತ್ತು ಜಿ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರಾವಧಿ ಐದು ವರ್ಷಗಳಿಂದ 30 ತಿಂಗಳಿಗೆ ಇಳಿಕೆ, ಅಧ್ಯಕ್ಷ-ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು 15 ತಿಂಗಳಿಗೆ ಮುನ್ನ ಮಂಡಿಸಲು ಅವಕಾಶ ನಿರಾಕರಣೆ ಸಹಿತ ಹಲವು ಬದಲಾವಣೆಗಳನ್ನು ಒಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ಮಸೂದೆಗೆ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮಂಗಳವಾದ ಸದನದಲ್ಲಿ ಮಸೂದೆಯ ವಿವರ ನೀಡಿದ ಸಚಿವ ಕೆ.ಎಸ್‌. ಈಶ್ವರಪ್ಪ, ರಾಜ್ಯದಲ್ಲಿ 6,021 ಗ್ರಾ.ಪಂ., 226 ತಾ.ಪಂ. ಮತ್ತು 30 ಜಿ.ಪಂ. ಗಳು ಕಾರ್ಯ ನಿರ್ವಹಿಸುತ್ತಿವೆ. ಕಾನೂನಿಗೆ ತಿದ್ದುಪಡಿ ತಂದು ಮಸೂದೆ ಮಂಡಿಸಲಾಗಿದ್ದು, ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.

ಮಸೂದೆಯ ಕುರಿತು ಮಾತನಾಡಿದ ಬಿಜೆಪಿಯ ಕುಮಾರ್‌ ಬಂಗಾರಪ್ಪ, ಗ್ರಾ.ಪಂ. ಚುನಾವಣೆಗಳು ರಾಜಕೀಯ ಪಕ್ಷದ ಚಿಹ್ನೆ ಇಲ್ಲದೇ ನಡೆದರೂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ವೇಳೆ ಸಾಕಷ್ಟು ಅವ್ಯವಸ್ಥೆಯಾಗುತ್ತಿದೆ. ಅಪಹರಣ, ಹಲ್ಲೆಗಳು ಸಂಭವಿಸುತ್ತಿವೆ. ಹಾಗಾಗಿ ಗೊತ್ತುಪಡಿಸಿದ ಮೀಸಲಾತಿ ಯಡಿ ಅತಿ ಹೆಚ್ಚು ಮತ ಪಡೆದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ವ್ಯವಸ್ಥೆ ತಂದರೆ ಒಳಿತು. ಇಲ್ಲವೇ ಅಧ್ಯಕ್ಷರು, ಉಪಾಧ್ಯಕ್ಷ ರನ್ನು ನೇರವಾಗಿ ಆಯ್ಕೆ ಮಾಡುವ ವ್ಯವಸ್ಥೆ ತರುವ ಬಗ್ಗೆಯೂ ಚಿಂತಿಸಬಹುದು ಎಂದು ಸಲಹೆ ನೀಡಿದರು.

ಬಳಿಕ ಪ್ರತಿಕ್ರಿಯಿಸಿದ ಕೆ.ಎಸ್‌. ಈಶ್ವರಪ್ಪ, ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಮಸೂದೆ ಮಂಡಿಸಲಾಗಿದ್ದು, ವಿಪಕ್ಷಗಳ ಸಲಹೆ, ಸೂಚನೆಯೂ ಅಗತ್ಯವಿತ್ತು. ಸದ್ಯದಲ್ಲೇ ಪಂಚಾಯತ್‌ ಚುನಾವಣೆ ನಡೆಯಲಿರುವುದರಿಂದ ಅನುಮೋದನೆ ಪಡೆಯುವ ಅನಿವಾರ್ಯತೆ ಇದೆ ಎಂದರು.

ತಾ.ಪಂ. ವ್ಯವಸ್ಥೆ ರದ್ದುಪಡಿಸಬೇಕಾದರೆ ಸಂಸತ್‌
ನಲ್ಲಿ ತಿದ್ದುಪಡಿ ತರಬೇಕಿದೆ. ನಕಲಿ ಜಾತಿ ಪ್ರಮಾಣ ಪತ್ತ ಸಲ್ಲಿಸುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ನಿರ್ದಿಷ್ಟ ಜಾತಿ, ಸಮುದಾಯದವರು ಇಲ್ಲದ ಕಡೆ ಜಾತಿ ಮೀಸಲಾತಿ ಕಾಯ್ದಿರಿಸದಿರುವ ಬಗ್ಗೆಯೂ ನಿಯಮಾವಳಿ ರೂಪಿಸಲು ಪರಿಶೀಲಿಸಲಾಗುವುದು ಎಂದರು.

ಪ್ರಮುಖ ಅಂಶಗಳು
-l ಗ್ರಾ.ಪಂ., ತಾ.ಪ., ಜಿ.ಪಂ. ಅಧ್ಯಕ್ಷ, ಉಪಾ ಧ್ಯಕ್ಷರ ಅಧಿಕಾರಾವಧಿ 30 ತಿಂಗಳಿಗೆ ಕಡಿತ
– ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ 15 ತಿಂಗಳಿಗೆ ಮುಂಚೆ ಅವಿಶ್ವಾಸ ಗೊತ್ತುವಳಿ ಇಲ್ಲ
– ಮತದಾನ ಮುಕ್ತಾಯವಾಗುವ 48 ತಾಸು ಮೊದಲು ಮಾತ್ರ ನೀತಿಸಂಹಿತೆ ಜಾರಿ
– ವಾರ್ಡ್‌ ಮೀಸಲಾತಿ ಅವಧಿ 10 ವರ್ಷಗಳಿಂದ ಐದು ವರ್ಷಕ್ಕೆ ಇಳಿಕೆ
– ಅಧಿಕಾರ ದುರ್ಬಳಕೆ ಮತ್ತಿತರ ಆರೋಪ ಸಾಬೀತಾದರೆ ಚುನಾವಣೆ ಸ್ಪರ್ಧೆ ನಿರ್ಬಂಧ ಅವಧಿ 6 ವರ್ಷಕ್ಕೆ ವಿಸ್ತರಣೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ: ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಎಚ್ ಡಿಕೆ

ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ: ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಎಚ್ ಡಿಕೆ

ಪಡಿತರ ವಿತರಣೆಯಲ್ಲಿ ಅಕ್ರಮ: 3 ನ್ಯಾಯ ಬೆಲೆ ಅಂಗಡಿ ಪರವಾನಗಿ ರದ್ದು

ಪಡಿತರ ವಿತರಣೆಯಲ್ಲಿ ಅಕ್ರಮ: 3 ನ್ಯಾಯ ಬೆಲೆ ಅಂಗಡಿ ಪರವಾನಗಿ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಮತ್ತೆ ಆರು ಜನರಿಗೆ ಕೋವಿಡ್-19: 197ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ ಆರು ಜನರಿಗೆ ಕೋವಿಡ್-19: 197ಕ್ಕೇರಿದ ಸೋಂಕಿತರ ಸಂಖ್ಯೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ