ಬಿಎಸ್‌ವೈ ನಾಯಕತ್ವಕ್ಕೆ ಯಾವುದೇ ಆಕ್ಷೇಪವಿಲ್ಲ : ಪ್ರಹ್ಲಾದ ಜೋಶಿ

Team Udayavani, Jan 28, 2020, 7:04 PM IST

ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನಾಯಕತ್ವದ ಬಗ್ಗೆ ಕೇಂದ್ರದ ನಾಯಕರಿಗಾಗಲಿ, ರಾಜ್ಯದ ನಾಯಕರಿಗಾಗಲಿ ಯಾವುದೇ ಆಕ್ಷೇಪ ಇಲ್ಲ. ಅವರ ನಾಯಕತ್ವದ ಬಗ್ಗೆ ಅಪಾರ ಗೌರವ ಇದೆ. ಅವರ ನಾಯಕತ್ವಕ್ಕೆ ಆಕ್ಷೇಪ ಎನ್ನುವುದು ಕೇವಲ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬಗ್ಗೆ ಪಕ್ಷದ ಹೈಕಮಾಂಡ್‌ ಅಪಾರ ಗೌರವ ಹೊಂದಿದೆ. ಅವರನ್ನು ಕಡೆಗಣಿಸುವ ಮಾತೇ ಇಲ್ಲ. ಸಚಿವ ಸಂಪುಟ ವಿಸ್ತರಣೆ, ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಪಕ್ಷ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದವರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಎಂಬ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷ ತೀರ್ಮಾನಿಸುತ್ತದೆ ಎಂದರು.

ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಟಕ್ಕೆ ಹಾಗೂ ಹಿಂಸಾಚಾರಕ್ಕೆ ವಿದೇಶಗಳಿಂದ ಹಣ ಹರಿದು ಬಂದಿರುವುದು ಆತಂಕಕಾರಿ ವಿಚಾರ. ವಿದೇಶಿ ಹಣ ಬಳಸಿಕೊಂಡು ಕೆಲವರು ಹೋರಾಟಕ್ಕೆ ಮುಂದಾಗಿರುವುದು ಕಳವಳಕಾರಿ ಸಂಗತಿ. ಸಿಎಎ ಬಗ್ಗೆ ಸಂಸತ್‌ನಲ್ಲಿ ಸುದೀರ್ಘ‌ ಚರ್ಚೆಯಾಗಿದೆ. ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿ, ಸಂಸತ್ತಿನಲ್ಲಿ ಒಪ್ಪಿಗೆ ಪಡೆದ ನಂತರವೇ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಅದರ ವಿರುದ್ಧ ಕೆಲವರು ವಿನಾಕಾರಣ ಹೋರಾಟಕ್ಕಿಳಿಸಿದ್ದು, ಇದರ ಹಿಂದೆ ಕಾಂಗ್ರೆಸ್‌ ಸೇರಿ ವಿಪಕ್ಷಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹಿಂದೆಲ್ಲಾ ಈಡೀ ಊರಿಗೆ ಒಂದೇ ಒಂದು ಎಸ್‌.ಟಿ.ಡಿ. ಬೂತ್‌ ಇರುತ್ತಿತ್ತು. ಇದು ದಶಕಗಳ ಹಿಂದಿನ ಮಾತು. ಆಗ, ಯಾರ ಬಳಿಯೂ ಮೊಬೈಲ್‌ ಇರುತ್ತಿರಲಿಲ್ಲವಾದ್ದರಿಂದ ಊರವರು...

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...