ಈ ಬಾರಿ ಸಿಇಟಿ ಬರೆಯುವವರ ಸಂಖ್ಯೆ ಇಳಿಮುಖ?

Team Udayavani, Apr 21, 2019, 6:30 AM IST

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ
ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯು ಫ‌ಲಿತಾಂಶ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮುನ್ನ ಪ್ರಕಟವಾಗಿರುವುದೇ ಇದಕ್ಕೆ ಕಾರಣ.

2019-20ನೇ ಸಾಲಿನ ವೃತ್ತಿಪರ ಕೋರ್ಸ್‌ ಗಳ ಸೀಟು ಹಂಚಿಕೆಗೆ ಎ. 29, 30ರಂದು ಮತ್ತು ಮೇ 1ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಸುಮಾರು 1.90 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಸಂಪ್ರದಾಯ ಮುರಿದು ಸಿಇಟಿಗೂ ಮೊದಲೇ ಫ‌ಲಿತಾಂಶ ನೀಡಿದ್ದ ರಿಂದ ವಿಜ್ಞಾನ ವಿಭಾಗದಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಾಧಿಕಾರದಿಂದ ಸಿಇಟಿಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಕ್ಕೆ ಬೇಕಾದ ಸೌಕರ್ಯವನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಕೂಡ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಪಿಯುಸಿ ಫ‌ಲಿತಾಂಶ ಹೊರಬಿದ್ದಿರು ವುದರಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಇರಿಸು ಮುರುಸು ಆರಂಭವಾಗಿದೆ. ಪಿಯುಸಿಯಲ್ಲೇ ಅನುತ್ತೀರ್ಣರಾದ್ದರಿಂದ ಸಿಇಟಿ ಏಕೆ ಬರೆಯಬೇಕು ಎಂಬ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಿದೆ ಎನ್ನಲಾಗುತ್ತಿದೆ.

ಐಸಿಎಸ್‌ಸಿ, ಸಿಬಿಎಸ್‌ಇ ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ಮತ್ತು ತೆಲಂಗಾಣ ಮೊದಲಾದ ರಾಜ್ಯಗಳ 12ನೇ ತರಗತಿ ಪರೀಕ್ಷೆಯ ಫ‌ಲಿತಾಂಶವೂ ಇನ್ನೂ ಪ್ರಕಟ ವಾಗಿಲ್ಲ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿ ಹೊರ ರಾಜ್ಯಗಳ ವಿದ್ಯಾರ್ಥಿ ಗಳಿಗೆ ಅನುಕೂಲವಾಗುವ ಸಾಧ್ಯತೆ ಇದೆ. ಅಲ್ಲದೆ, ಹಂಚಿಕೆಯಾಗದೆ ಬಾಕಿ ಉಳಿಯುವ ಎಂಜಿನಿಯರಿಂಗ್‌ ಸೀಟುಗಳ ಪ್ರಮಾಣವೂ ಹೆಚ್ಚಾಗುವ ಆತಂಕ ಇದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

  • ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.71 ಮತದಾನವಾಗಿದೆ. ಅಲ್ಲಲ್ಲಿ...

  • ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಉಳಿಸಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಪ್ರಯತ್ನಪಡುತ್ತಿರುವಂತೆಯೇ, ಜೆಡಿಎಸ್‌ ಜತೆಗಿನ ಮೈತ್ರಿ ಖತಂಗೊಳಿಸುವುದೇ ಉತ್ತಮ...

  • ಬೆಂಗಳೂರು: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ರೀತಿಯಲ್ಲಿ ಲೋಕಸಭಾ ಚುನಾವಣೋತ್ತರ ಸಮೀಕ್ಷಾ ಫ‌ಲಿತಾಂಶ ಹೊರಬಿದ್ದಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ಆಘಾತ...

  • ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,...

  • ಕಲಬುರಗಿ: ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಡಾ.ಉಮೇಶ ಜಾಧವ್‌ ಅವರು ಪೊಲೀಸ್‌...

ಹೊಸ ಸೇರ್ಪಡೆ