ವಿವಾದಕ್ಕೆ ಕಾರಣವಾದ ಟಿಪ್ಪು ಸುಲ್ತಾನ್ ಜಯಂತಿ ರದ್ದು; ಸರಕಾರದ ಆದೇಶ
Team Udayavani, Jul 30, 2019, 2:53 PM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿಯನ್ನು ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರದ್ದುಗೊಳಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಟಿಪ್ಪು ಜಯಂತಿಗೆ ಚಾಲನೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ತೀವ್ರ ಪರ, ವಿರೋಧ ಚರ್ಚೆಗೆ ಗ್ರಾಸವಾಗಿತ್ತು.
ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ನವೆಂಬರ್ 10ರಂದು ಟಿಪ್ಪು ಜಯಂತಿಯನ್ನು ಸರಕಾರದ ವತಿಯಿಂದಲೇ ಆಚರಿಸಲಾಗುತ್ತಿತ್ತು. ಆದರೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಟಿಪ್ಪು ಜಯಂತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು