ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್
ಪ್ರಧಾನಿ ನರೇಂದ್ರ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ
Team Udayavani, Dec 8, 2021, 11:00 PM IST
ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಮಹತ್ವದ ಬೇಡಿಕೆಯಿಟ್ಟಿದ್ದಾರೆ. ತಿರುವನಂತಪುರಂನಿಂದ ಕಾಸರಗೋಡಿಗೆ ಸಿಲ್ವರ್‌ಲೈನ್ ಅರೆ ಅತಿವೇಗದ ರೈಲು ಸಂಚಾರ ಮಾರ್ಗ ನಿರ್ಮಾಣ ಮಾಡಿ, ಇದರಿಂದ ಕೇರಳದ ಅಭಿವೃದ್ಧಿಯಾಗುವುದು ಮಾತ್ರವಲ್ಲ, ದೇಶಕ್ಕೂ ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವರೊಂದಿಗೆ ಜುಲೈನಲ್ಲಿ ಮಾತುಕತೆ ನಡೆಸಲಾಗಿತ್ತು. ಆದರೆ ರೈಲ್ವೆಯ ಆರ್ಥಿಕಸ್ಥಿತಿ ಹಿನ್ನೆಲೆಯಲ್ಲಿ ಅವರು ಸ್ವಲ್ಪ ಹಿಂಜರಿದಿದ್ದರು. ಇದೀಗ ನೀವು ಮಧ್ಯಪ್ರವೇಶಿಸಿ ಯೋಜನೆಗೆ ಅನುಮೋದನೆ ನೀಡಿ ಎಂದು ವಿನಂತಿಸಿದ್ದಾರೆ.
ಈಗಾಗಲೇ ಕೇರಳ ಸರ್ಕಾರ ಭೂಸ್ವಾಧೀನಕ್ಕೆ ಬೇಕಾದ ಅಷ್ಟೂ ಹಣ (13,700 ಕೋಟಿ ರೂ.) ನೀಡುವುದಾಗಿ ಘೋಷಿಸಿದೆ. ಒಂದು ವೇಳೆ ಕೇರಳ ರೈಲ್ವೆ ಘಟಕ ಬಾಹ್ಯ ಸಾಲ ಪಡೆದರೆ, ಅದರ ಹೊಣೆಯನ್ನೂ ಹೊರುವುದಾಗಿ ಪಿಣರಾಯಿ ಭರವಸೆ ನೀಡಿದ್ದಾರೆ. ಈ ಮಧ್ಯೆ ಪ್ರತಿಪಕ್ಷ ಕಾಂಗ್ರೆಸ್, ಕೇಂದ್ರ ಈ ಯೋಜನೆಗೆ ಅನುಮೋದನೆ ನೀಡಿಲ್ಲ, ಆದರೂ ರಾಜ್ಯ ಸರ್ಕಾರ ಭೂಸ್ವಾಧೀನ ನಡೆಸುತ್ತಿದೆ ಎಂದು ಕೇರಳ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ಇದನ್ನೂ ಓದಿ : ರಾಜ್ಯದಲ್ಲಿಂದು 399 ಕೋವಿಡ್ ಪಾಸಿಟಿವ್ ಪತ್ತೆ: 6 ಮಂದಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ