ಕೋವಿಡ್ ಭೀತಿ, ಊರಿನತ್ತ ಮುಖ ಮಾಡಿದ ಜನರು ಹೆದ್ದಾರಿಗಳಲ್ಲಿ ವಾಹನಗಳ ಸಾಲು
Team Udayavani, Jul 4, 2020, 5:07 PM IST
ಬೆಂಗಳೂರು ; ಕೋವಿಡ್ ಸೋಂಕಿತರ ಸಂಖ್ಯೆ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿರುವ ಜನರಲ್ಲಿ ಆತಂಕ ಮನೆಮಾಡಿದ್ದು ಇದರ ನಡುವೆ ರಾಜ್ಯ ಸರಕಾರ ಏರುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಊರುಗಳತ್ತ ಹೆಜ್ಜೆ ಹಾಕುತ್ತಿದ್ದು ನಗರದ ಹೆಚ್ಚಿನ ರಸ್ತೆಗಳು ವಾಹನಗಳಿಂದ ತುಂಬಿದೆ.
ಬೆಂಗಳೂರಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಇದರಿಂದ ಭಯಭೀತರಾದ ಜನರು ಬೆಂಗಳೂರು ಬಿಟ್ಟು ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಿತ್ಯ ಸಾವಿರಾರು ಪ್ರಕರಣಗಳು ಬೆಳಕಿಗೆ ಬರುತಿದ್ದು ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ ಇದರಿಂದ ಜನರು ಮನೆಗಳನ್ನು ಖಾಲಿಮಾಡಿಕೊಂಡು ಊರಿನತ್ತ ಮುಖ ಮಾಡಿದ್ದಾರೆ ಇದರಿಂದಾಗಿ ಶನಿವಾರ ರಾಜ್ಯದ ಮುಖ್ಯ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಶನಿವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಆರಂಭವಾಗಲಿದ್ದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಜನರು ವಾಹನಗಳನ್ನು ಮಾಡಿಕೊಂಡು ಊರಿಗೆ ಪ್ರಯಾಣ ಬೆಳೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ
ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!
ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು
ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ
ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು