ಸೌರಶಕ್ತಿಯಿಂದಲೇ ದುಪ್ಪಟ್ಟು ವಿದ್ಯುತ್‌!

ಕರೆಂಟ್ ಸಮಸ್ಯೆ ನಿವಾರಿಸಿದ ಪ್ರಕೃತಿ; ವಿದ್ಯುತ್‌ ಬೇಡಿಕೆ ಕಡಿತಕ್ಕೆ ಮಳೆಯೂ ಕಾರಣ

Team Udayavani, May 3, 2019, 6:00 AM IST

Ban03051901Medn

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿದ್ದಂತೆ ವಿದ್ಯುತ್‌ ಬೇಡಿಕೆಯೂ ಏರುಮುಖವಾಗಿದ್ದು, ಸರಾಸರಿ ವಿದ್ಯುತ್‌ ಬೇಡಿಕೆ 11,500 ಮೆಗಾವ್ಯಾಟ್‌ಗೆ ಏರಿಕೆಯಾಗಿದೆ. ಆದರೆ ಕಳೆದ ಬೇಸಿಗೆಗೆ ಹೋಲಿಸಿದರೆ ಈ ಬಾರಿ ಸೌರಶಕ್ತಿ ವಿದ್ಯುತ್‌ ಉತ್ಪಾದನೆ ದುಪ್ಪಟ್ಟಾಗಿದ್ದು, ಪವನಶಕ್ತಿ ಉತ್ಪಾದನೆಯೂ ಕೈ ಹಿಡಿದಿದೆ. ಜತೆಗೆ ಮಳೆರಾಯ ಕೃಪೆ ತೋರಿರುವುದು ವಿದ್ಯುತ್‌ ಕೊರತೆ ಆತಂಕವನ್ನು ಸದ್ಯಕ್ಕೆ ನಿವಾರಿಸಿದೆ.

ಕಳೆದ ವರ್ಷದ ಬೇಸಿಗೆ ಹೋಲಿಸಿದರೆ ಈ ಬಾರಿ ಬೇಸಿಗೆಯಲ್ಲಿ 2000 ಮೆಗಾವ್ಯಾಟ್ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇಷ್ಟಾದರೂ ಸೌರಶಕ್ತಿ, ಪವನಶಕ್ತಿ ಮೂಲದಿಂದಲೇ ಬೇಡಿಕೆಯ ಅರ್ಧದಷ್ಟು ವಿದ್ಯುತ್‌ ಪೂರೈಕೆಯಾಗುತ್ತಿರುವುದು ವರದಾನವಾಗಿ ಪರಿಣಮಿಸಿದೆ. ರಾಜ್ಯದ ಹಲವೆಡೆ 15 ದಿನದಿಂದ ಮಳೆಯಾಗುತ್ತಿರುವುದರಿಂದ ಬೇಡಿಕೆಯೂ ತಗ್ಗಿದ್ದು, ಉಷ್ಣ ಸ್ಥಾವರ ಹಾಗೂ ಜಲವಿದ್ಯುತ್‌ ಉತ್ಪಾದನೆ ಮೇಲಿನ ಒತ್ತಡ ತಗ್ಗಿಸಿದೆ. ಹಾಗಾಗಿ ಈ ಬಾರಿಯ ಬೇಸಿಗೆಯಲ್ಲಿ ವಿದ್ಯುತ್‌ ಕಡಿತವಿಲ್ಲದೆ ಪರಿಸ್ಥಿತಿ ನಿಭಾಯಿಸುವ ವಿಶ್ವಾಸವನ್ನು ಇಂಧನ ಇಲಾಖೆ ವ್ಯಕ್ತಪಡಿಸಿದೆ.

ದಿನ ಕಳೆದಂತೆ ರಾಜ್ಯದಲ್ಲಿ ಬಿಸಿಲಿನ ತಾಪ ತೀವ್ರ ಪ್ರಮಾಣದಲ್ಲಿ ಏರುತ್ತಿದೆ. ಜತೆಗೆ ವಿದ್ಯುತ್‌ ಬೇಡಿಕೆಯೂ ಏರುತ್ತಲೇ ಇದೆ. ಕಳೆದ ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ 10,500 ಮೆಗಾವ್ಯಾಟ್‌ನಷ್ಟಿತ್ತು. ಈ ಬಾರಿಯ ಬೇಸಿಗೆಯಲ್ಲಿ 12,500 ಮೆಗಾವ್ಯಾಟ್‌ನಷ್ಟಿದ್ದು, ಸರಾಸರಿ 2000 ಮೆಗಾವ್ಯಾಟ್‌ನಷ್ಟು ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಕಳೆದ ಮಾರ್ಚ್‌ 29ರಂದು 12889 ಮೆಗಾವ್ಯಾಟ್‌ನಷ್ಟು ಬೇಡಿಕೆ ಸೃಷ್ಟಿಯಾಗಿದ್ದು, ದಾಖಲೆ ಎನಿಸಿತ್ತು.

ಸೌರಶಕ್ತಿ ವಿದ್ಯುತ್‌ ದುಪ್ಪಟ್ಟು: ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗುತ್ತಿದ್ದರೂ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ತಡೆಯುವಲ್ಲಿ ಸೌರಶಕ್ತಿ ಮೂಲ ಕೈ ಹಿಡಿದಂತಿದೆ. ಸದ್ಯ ಸೌರ ಶಕ್ತಿ ಮೂಲದಿಂದ ನಿತ್ಯ ಸರಾಸರಿ 5000 ಮೆಗಾವ್ಯಾಟ್‌ನಷ್ಟು ವಿದ್ಯುತ್‌ ಪೂರೈಕೆಯಾಗುತ್ತಿದ್ದು, ರಾಜ್ಯದ ಒಟ್ಟು ವಿದ್ಯುತ್‌ ಬೇಡಿಕೆಯ ಶೇ. 45ರಷ್ಟು ವಿದ್ಯುತ್‌ ಸೌರಶಕ್ತಿ ಮೂಲದಿಂದಲೇ ಪೂರೈಕೆಯಾಗುತ್ತಿದೆ. ಕಳೆದ ವರ್ಷ ಬೇಸಿಗೆಯಲ್ಲಿ ಸೌರಶಕ್ತಿ ಮೂಲದಿಂದ ಸುಮಾರು 2,500ರಿಂದ 3000 ಮೆಗಾವ್ಯಾಟ್ ವಿದ್ಯುತ್‌ ಪೂರೈಕೆಯಾಗುತ್ತಿತ್ತು

ಆದರೆ ಈ ಬಾರಿ ಸರಿಸುಮಾರು ದುಪ್ಪಟ್ಟಾಗಿದೆ. ಹಾಗಾಗಿ ಕೆಲವೆಡೆ ಹಗಲು ಹೊತ್ತಿನಲ್ಲೇ ಕೃಷಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ವಿದ್ಯುತ್‌ ಪೂರೈಸಿ ಪರಿಸ್ಥಿತಿ ನಿಭಾಯಿಸುತ್ತಿದೆ.

ಪವನಶಕ್ತಿ ವಿದ್ಯುತ್‌ ಹೆಚ್ಚಳ: ಸೌರಶಕ್ತಿ ಜತೆಗೆ ಪವನ ಶಕ್ತಿ ಮೂಲದ ವಿದ್ಯುತ್‌ ಉತ್ಪಾದನೆಯೂ ಹೆಚ್ಚಾಗಿದೆ. ಕೆಲ ದಿನಗಳಿಂದ ಪವನಶಕ್ತಿ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದು, ಮುಂದಿನ ಮೂರ್‍ನಾಲ್ಕು ತಿಂಗಳ ಕಾಲ ಪವನಶಕ್ತಿ ವಿದ್ಯುತ್‌ ಉತ್ಪಾದನೆ ಉತ್ತಮ ಸ್ಥಿತಿಯಲ್ಲಿರಲಿದೆ. ಗುರುವಾರ ಪವನಶಕ್ತಿ ಮೂಲದಿಂದ 2240 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದನೆಯಾಗಿತ್ತು. ಸೌರ ಹಾಗೂ ಪವನಶಕ್ತಿ ಮೂಲದಿಂದ 5,500ರಿಂದ 6000 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದನೆಯಾದರೆ ಕೇಂದ್ರ ಸರ್ಕಾರದಿಂದ ವಿದ್ಯುತ್‌ ಹಂಚಿಕೆಯಡಿ 3,500 ಮೆಗಾವ್ಯಾಟ್ ಪೂರೈಕೆಯಾಗುತ್ತಿದೆ. ಹಾಗಾಗಿ ಉಳಿಕೆ ಬೇಡಿಕೆಯನ್ನಷ್ಟೇ ಉಷ್ಣ ಸ್ಥಾವರ ಹಾಗೂ ಜಲವಿದ್ಯುತ್‌ ಮೂಲದಿಂದ ಪೂರೈಸಲಾಗುತ್ತಿದೆ. ಸಾಮಾನ್ಯವಾಗಿ ರಾತ್ರಿ ವೇಳೆ ಈ ಮೂಲದಿಂದ ವಿದ್ಯುತ್‌ ಪೂರೈಸಲಾಗುತ್ತಿದೆ ಎಂದು ಕರ್ನಾಟಕ ವಿದ್ಯುತ್‌ ನಿಗಮದ (ಕೆಪಿಸಿಎಲ್) ಮೂಲಗಳು ತಿಳಿಸಿವೆ.

ವರದಾನವಾದ ಮಳೆ: ಈ ಬಾರಿಯ ಬೇಸಿಗೆಯಲ್ಲಿ ಸರಾಸರಿ ವಿದ್ಯುತ್‌ ಬೇಡಿಕೆ 10,500ರಿಂದ 11,500 ಮೆಗಾವ್ಯಾಟ್‌ನಷ್ಟಿತ್ತು. ಆದರೆ 15 ದಿನಗಳಿಂದ ಹಲವೆಡೆ ಮಳೆಯಾಗುತ್ತಿರುವುದರಿಂದ ವಿದ್ಯುತ್‌ ಬೇಡಿಕೆಯಲ್ಲಿ 2000 ಮೆಗಾವ್ಯಾಟ್‌ನಷ್ಟು ಇಳಿಕೆಯಾಗಿದೆ. ಇನ್ನೂ ಕೆಲವೆಡೆ ಮಳೆ ಮುಂದುವರಿದಿರುವುದರಿಂದ ಬೇಡಿಕೆ ಕಡಿಮೆ ಇದೆ. ಹಾಗಾಗಿ ಬಳ್ಳಾರಿಯ ಬಿಟಿಪಿಎಸ್‌ ಘಟಕ ದಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು, ರಾಯಚೂ ರಿನ ಆರ್‌ಟಿಪಿಎಸ್‌ ಸ್ಥಾವರದಲ್ಲಿ ಕನಿಷ್ಠ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ ಎಂದು ಹೇಳಿವೆ.

ರಾಜ್ಯದಲ್ಲಿ ಸದ್ಯ ವಿದ್ಯುತ್‌ ಬೇಡಿಕೆ ತಗ್ಗಿದೆ. ಪವನಶಕ್ತಿ, ಸೌರಶಕ್ತಿ ಮೂಲದಿಂದಲೂ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದೆ. ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ ಕಡಿತವಿಲ್ಲದಂತೆ ಪರಿಸ್ಥಿತಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ.
-ಸೆಲ್ವ ಕುಮಾರ್‌, ಕೆಪಿಟಿಸಿಎಲ್ ಎಂಡಿ

-ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.