ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಡ್ರಗ್ಸ್‌ ವ್ಯಸನಿಯಿಂದ ಐದು ಸಾವಿರ ರೂ. ಲಂಚ ಪಡೆದ ಆರೋಪದಲ್ಲಿ ಬಂಧನ

Team Udayavani, Jan 22, 2022, 9:00 PM IST

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ನಿವಾಸಕ್ಕೆ ಭದ್ರತೆಗೆ ನಿಯೋಜನೆಗೊಂಡು ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳು ಆಟೋ ಚಾಲಕನಿಂದ ಲಂಚ ಪಡೆದು ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮತ್ತೂಂದೆಡೆ ಗಾಂಜಾ ಪ್ರಕರಣದ ಪ್ರಮುಖ ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಕೋರಮಂಗಲ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಶಿವಕುಮಾರ್‌ ಮತ್ತು ಸಂತೋಷ್‌ ಬಂಧಿತರು. ಆರೋಪಿತ ಕಾನ್‌ಸ್ಟೇಬಲ್‌ಗಳು ಕೆಲ ದಿನಗಳ ಹಿಂದೆ ಗಾಂಜಾ ತುಂಬಿದ್ದ ಸಿಗರೇಟ್‌ ಸೇವಿಸುತ್ತಿದ್ದ ಆಟೋ ಚಾಲಕನ ಇಲಿಯಾಸ್‌ನನ್ನು ಬೆದರಿಸಿ ಒಂದು ಲಕ್ಷ ರೂ.ಗೆ ಬೇಡಿಕೆಯಿಟ್ಟು 5 ಸಾವಿರ ರೂ. ಲಂಚ ಪಡೆದ್ದರು. ಈ ಸಂಬಂಧ ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಿಸಿಬಿಗೆ ವರ್ಗಾವಣೆಯಾದ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಸದ್ಯ ಅಮಾನತುಗೊಂಡಿರುವ ಸಂತೋಷ್‌ ಹಾಗೂ ಶಿವಕುಮಾರ್‌ ಈ ಮೊದಲು ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ 2021 ಅ.25ರಂದು ಆಡುಗೋಡಿ ನಿವಾಸಿ ಆಟೋ ಚಾಲಕ ಇಲಿಯಾಸ್‌ ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್‌ ಬಳಿ ಸ್ನೇಹಿತ ಸೈಯದ್‌ ಜತೆ ಗಾಂಜಾ ಸೇವನೆ ಮಾಡುತ್ತಿದ್ದ. ಆ ವೇಳೆ ಕರ್ತವ್ಯನಿರತ ಶಿವಕುಮಾರ್‌ ಮತ್ತು ಸಂತೋಷ್‌ ದಾಳಿ ನಡೆಸಿ ಇಬ್ಬರನ್ನು ಹಿಡಿದು, ಗಾಂಜಾ ತುಂಬಿದ್ದ ಸಿಗರೇಟ್‌ ವಶಕ್ಕೆ ಪಡೆದಿದ್ದರು. ಅಷ್ಟೇ ಅಲ್ಲದೇ, ಒಂದು ಲಕ್ಷ ರೂ. ಕೊಟ್ಟರೆ ಪ್ರಕರಣ ದಾಖಲಿಸುವುದಿಲ್ಲ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದಕ್ಕೆ ಹೆದರಿದ ಇಲಿಯಾಸ್‌ ಐದು ಸಾವಿರ ರೂ. ಕೊಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ : ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಆದರೆ, ಇದೀಗ ಇಬ್ಬರು ಕಾನ್‌ಸ್ಟೇಬಲ್‌ಗಳ ವಿರುದ್ಧ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸ್ನೇಹಿತರ ಸಹಾಯ ಪಡೆದು ದೂರು ನೀಡುತ್ತಿದ್ದೇನೆ. ಈ ಮೊದಲು ದೂರು ನೀಡಬೇಕಿತ್ತು. ಆದರೆ, ಕಾನ್‌ಸ್ಟೇಬಲ್‌ಗಳು ಇಲ್ಲದಿರುವ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಾರೆ ಎಂಬ ಭಯದಲ್ಲಿ ದೂರು ನೀಡಿರಲಿಲ್ಲ. ಇದೀಗ ಅವರೇ ಡ್ರಗ್ಸ್‌ ಪ್ರಕರಣದ ಆರೋಪಿಗಳಾಗಿರುವುದರಿಂದ ದೂರು ನೀಡಿದ್ದೇನೆ ಎಂದು ಹೇಳಿರುವುದಾಗಿ ಪೊಲೀಸರು ಹೇಳಿದರು.

ಇಬ್ಬರು ಪೆಡ್ಲರ್‌ಗಳು ವಶಕ್ಕೆ

ಮತ್ತೂಂದೆಡೆ ಡ್ರಗ್ಸ್‌ ಪ್ರರಕಣದ ಪ್ರಮುಖ ಆರೋಪಿಗಳಾದ ಅಖೀಲ್‌ ರಾಜ್‌ ಮತ್ತು ಅಮ್ಜದ್‌ ಖಾನ್‌ನನ್ನು ಸಿಸಿಬಿ ಪೊಲೀಸರು ಮತ್ತೂಮ್ಮೆ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಎಷ್ಟು ದಿನಗಳಿಂದ ಕಾನ್‌ಸ್ಟೇಬಲ್‌ಗಳ ಜತೆ ವ್ಯವಹಾರ ನಡೆಸುತ್ತಿದ್ದಿರಾ? ಗಾಂಜಾ ದಂಧೆಯ ರೂವಾರಿಗಳು ಯಾರು? ಇನ್ನು ಯಾರೆಲ್ಲ ಸಂಪರ್ಕದಲ್ಲಿದ್ದಾರೆ? ಎಂಬೆಲ್ಲ ವಿಚಾರಣೆ ನಡೆಯುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇನ್ಸ್‌ಪೆಕ್ಟರ್‌ಗೆ ಗಾಂಜಾ ಪ್ರಕರಣ ಮೊದಲೇ ತಿಳಿದಿತ್ತಾ?

ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಕಾನ್‌ಸ್ಟೇಬಲ್‌ಗಳು ಗಾಂಜಾ ದಂಧೆಕೋರರ ಜತೆ ಭಾಗಿಯಾಗಿರುವ ಬಗ್ಗೆ ಕೋರಮಂಗಲ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ಗೆ ಈ ಮೊದಲೇ ತಿಳಿದಿತ್ತು ಎನ್ನಲಾಗಿದೆ. ಇಬ್ಬರು ಪೊಲೀಸ್‌ ಇಲಾಖೆಯಲ್ಲಿರುವುದರಿಂದ ಪ್ರಕರಣ ದಾಖಲಿಸದೇ ನೇರವಾಗಿ ಆರೋಪಿಗಳನ್ನು ಸಿಸಿಬಿ ಪೊಲೀಸರಿಗೆ ವರ್ಗಾಯಿಸಿದ್ದರು ಎನ್ನಲಾಗಿದೆ. ಆದರೆ, ಸಿಸಿಬಿ ಪೊಲೀಸರು ಇಲಾಖೆಗೆ ಕಪ್ಪು ಚುಕ್ಕೆ ಬರುತ್ತದೆ ಎಂದು ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಯಾವುದೇ ಕ್ರಮಕೈಗೊಳ್ಳದೆ ಕಳುಹಿಸಿದ್ದರು ಎಂದು ಹೇಳಲಾಗಿದೆ. ನಂತರ ಕೋರಮಂಗಲ ಠಾಣೆಗೆ ವರ್ಗಾವಣೆಗೊಂಡು ದಂಧೆಕೋರರ ಜತೆ ವ್ಯವಹಾರ ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

kaikamba

ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 24ರಂದು ಉದ್ಘಾಟನೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

3

ಮನೆ ಮನೆಗಳಲ್ಲಿ ಕುಂಬಾರಿಕೆಗೆ ಹೆಜ್ಜೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.