ಮಾನ್ಯ : ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Team Udayavani, Jul 31, 2019, 5:11 PM IST

ಕಾಸರಗೋಡು: ಇಲ್ಲಿನ ಬದಿಯಡ್ಕ ಗ್ರಾಮ ಪಂಚಾಯಿತಿಗೊಳಪಟ್ಟ ಮಾನ್ಯ ಎಂಬಲ್ಲಿ ಈಜಲೆಂದು ಕೆರೆಗೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಆಲಂಪಾಡಿ ಬಾಪಚ್ಚಿ ನಗರದ ಶಾಫಿ ಅವರ ಪುತ್ರ ಖಾದರ್ (18) ಮತ್ತು ಬೆಳ್ಳೂರಡ್ಕ ಮಹಮ್ಮದ್ ಅವರ ಪುತ್ರ ಸಾಲಿ (17) ಎಂದು ಗುರುತಿಸಲಾಗಿದೆ. ಕರ್ಕಡ ಅಮವ್ಯಾಸೆ ಪ್ರಯುಕ್ತ ಇಂದು ಕೇರಳದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಇದ್ದ ಕಾರಣ ಒಟ್ಟು 30 ಜನ ಯುವಕರ ತಂಡವು ಮಾನ್ಯ ಸಮೀಪ ಕೆರೆಯಲ್ಲಿ ಈಜಲು ಹೋಗಿದ್ದರು.


ಈ ಸಂದರ್ಭದಲ್ಲಿ ಖಾದರ್ ಹಾಗೂ ಸಾಲಿ ಆಯತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ