ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jul 2, 2020, 6:13 PM IST
ಉಡುಪಿ ; ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗುರುವಾರ ಉಡುಪಿಯಲ್ಲಿ 14 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದ್ದು ಇಂದಿನ ಹದಿನಾಲ್ಕು ಹೊಸ ಪ್ರಕರಣಗಳು ಸರ್ಪಡೆಗೊಂಡಿದ್ದು ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1220ಕ್ಕೆ ಏರಿಕೆಯಾಗಿದೆ.
ಬುಧವಾರ ಜಿಲ್ಲೆಯಲ್ಲಿ ಒಂಬತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂರು ಮಂದಿ ಸಾವನ್ನಪ್ಪಿದ್ದರು.