ಕೋವಿಡ್ ಮುನ್ನೆಚ್ಚರಿಕೆ ; ಉಡುಪಿ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್
Team Udayavani, Jul 16, 2020, 2:27 PM IST
ಉಡುಪಿ : ಬುಧವಾರ ಜಿಲ್ಲಾಸ್ಪತ್ರೆಯ ಇಬ್ಬರು ವ್ಯದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಡಿದೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲಾ ಆಸ್ಪತ್ರೆಯ ವ್ಯದ್ಯರಿಗೂ ಸೋಂಕು ದೃಢಪಟ್ಟಿರುವ ನಿಟ್ಟಿನಲ್ಲಿ ಮೂರು ದಿನಗಳ ತುರ್ತು ಸೇವೆ, ಫೀವರ್ ಕ್ಲಿನಿಕ್ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಸರ್ಜನ್ ತಿಳಿಸಿದ್ದಾರೆ.
ಬುಧವಾರ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದ್ದು ಆದುದರಿಂದ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು ಜೊತೆಗೆ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗವನ್ನು ಮೂರುದಿನಗಳ ಕಾಲ ಬಂದ್ ಮಾಡಲಾಗಿದೆ.
ಕೇವಲ ತುರ್ತು ಚಿಕಿತ್ಸೆ, ಐಸೋಲೇಷನ್ ವಿಭಾಗ ಹಾಗೂ ಫೀವರ್ ಕ್ಲಿನಿಕ್ ಗಳು ಮಾತ್ರ ಕಾರ್ಯಾಚರಿಸಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?