ಏಕರೂಪ ನಾಗರಿಕ ಸಂಹಿತೆ ಈಶಾನ್ಯ ರಾಜ್ಯಗಳ ಬುಡಕಟ್ಟು ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ…

ಬುಡಕಟ್ಟು ಸಮುದಾಯಗಳ ವೈವಿಧ್ಯತೆ ಮತ್ತು ಸಂಸ್ಕೃತಿಯನ್ನು ಬಿಜೆಪಿ ಗೌರವಿಸುತ್ತದೆ

Team Udayavani, Jul 5, 2023, 1:41 PM IST

ಏಕರೂಪ ನಾಗರಿಕ ಸಂಹಿತೆ ಈಶಾನ್ಯ ರಾಜ್ಯಗಳ ಬುಡಕಟ್ಟು ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ…

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಲಾಗುವುದು ಎಂಬ ಊಹಾಪೋಹದ ನಡುವೆಯೇ UCC ದೇಶದ ಈಶಾನ್ಯ ರಾಜ್ಯಗಳಿಗೆ ಮತ್ತು ಬುಡಕಟ್ಟು ಸಮುದಾಯಕ್ಕೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಕೇಂದ್ರದ ರಾಜ್ಯ ಆರೋಗ್ಯ ಖಾತೆ ಸಚಿವ ಎಸ್‌ ಪಿ ಸಿಂಗ್‌ ಬಘೇಲ್‌ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮಲೆನಾಡಿನಲ್ಲಿ ಗಾಳಿ ಮಳೆಯ ಆರ್ಭಟ… ಧರೆಗುರುಳಿದ ವಿದ್ಯುತ್ ಕಂಬ, ಮನೆ ಮೇಲೆ ಬಿದ್ದ ಮರ

ಈಶಾನ್ಯ ರಾಜ್ಯದ ಬುಡಕಟ್ಟು ಸಮುದಾಯದ ಹಕ್ಕುಗಳು ಮತ್ತು ಸಂಪ್ರದಾಯಗಳಿಗೆ ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿರುವ ಸಚಿವ ಬಘೇಲ್‌, ಬುಡಕಟ್ಟು ಸಮುದಾಯಗಳ ವೈವಿಧ್ಯತೆ ಮತ್ತು ಸಂಸ್ಕೃತಿಯನ್ನು ಬಿಜೆಪಿ ಗೌರವಿಸುತ್ತದೆ ಮತ್ತು ಅವರ ಹಿತಾಸಕ್ತಿಗಳಿಗೆ ವಿರುದ್ಧವಾದ ಯಾವುದೇ ಕಾನೂನನ್ನು ಹೇರುವುದಿಲ್ಲ ಎಂದು ತಿಳಿಸಿದ್ದಾರೆ.

ದೇಶದ ನೆಲದ ಅತ್ಯುನ್ನತ ಹುದ್ದೆಗೆ ಭಾರತೀಯ ಜನತಾ ಪಕ್ಷ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದೆ. ಅಷ್ಟೇ ಅಲ್ಲ ದೊಡ್ಡ ಪ್ರಮಾಣದಲ್ಲಿ ಬುಡಕಟ್ಟು ಸಮುದಾಯದ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಚಿವರನ್ನು ಹೊಂದಿದೆ. ಆ ನಿಟ್ಟಿನಲ್ಲಿ ನಮ್ಮ ಪಕ್ಷ (ಬಿಜೆಪಿ) ಈಶಾನ್ಯ ರಾಜ್ಯದ ಸಂಪ್ರದಾಯವನ್ನು ಗೌರವಿಸಲಿದೆ. ಆದರೆ ಈ ವಿಚಾರದಲ್ಲಿ ತುಷ್ಠೀಕರಣದ ರಾಜಕೀಯ ಸರಿಯಲ್ಲ ಎಂದು ಹೇಳಿದರು.

ಅಸ್ಸಾಂ, ಮೇಘಾಲಯ, ತ್ರಿಪುರಾ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಕೆಲವು ಬುಡಕಟ್ಟು ಪ್ರದೇಶಗಳಿಗೆ ವಿಶೇಷ ನಿಬಂಧನೆಗಳನ್ನು ನೀಡುವ ಸಂವಿಧಾನದ ಶೆಡ್ಯೂಲ್‌ 6ರ ಪ್ರಕಾರ, ಅವರ ರಾಜ್ಯದ ಶಾಸಕರು ಕೇಂದ್ರದ ನಿರ್ಧಾರವನ್ನು ಅಂಗೀಕರಿಸದ ಹೊರತು ಅವರಿಗೆ ಯಾವುದೇ ಮಸೂದೆ ಅನ್ವಯಿಸುವುದಿಲ್ಲ ಎಂದು ಬಘೇಲ್‌ ವಿವರಿಸಿದ್ದಾರೆ.

ಇದರ ಹೊರತಾಗಿಯೂ ಯಾವುದೇ ಕಾನೂನು ಜಾರಿಗೊಳಿಸುವ ಮೊದಲು ಇತರ ರಾಜ್ಯಗಳ ಬುಡಕಟ್ಟು ಜನಾಂಗದವರ ಜತೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಈಶಾನ್ಯ ಮತ್ತು ಇತರ ಪ್ರದೇಶದ ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಕಾನೂನು ಮತ್ತು ಸಂಸದೀಯ ಸ್ಥಾಯಿ ಸಮಿತಿ ಮುಖ್ಯಸ್ಥ, ರಾಜ್ಯಸಭಾ ಸಂಸದ ಸುಶೀಲ್‌ ಕುಮಾರ್‌ ಮೋದಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಘೇಲ್‌ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.