ಅನ್‌ ಲಾಕ್‌ ಎಂದರೆ ಜವಾಬ್ದಾರಿ ಮರೆತು ಓಡಾಡುವುದು ಎಂದಲ್ಲ


Team Udayavani, Jun 12, 2021, 7:20 AM IST

ಅನ್‌ ಲಾಕ್‌ ಎಂದರೆ ಜವಾಬ್ದಾರಿ ಮರೆತು ಓಡಾಡುವುದು ಎಂದಲ್ಲ

ಹನ್ನೊಂದು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಭಾಗಶಃ ಅನ್‌ ಲಾಕ್‌ ಘೋಷಿಸಲಾಗಿದೆ. ಇದು ಸೋಮವಾರ  ಜಾರಿಗೆ ಬರಲಿದೆ. ಹಾಗೆಂದು ಇದು ಸಂಪೂರ್ಣ ಓಡಾಟಕ್ಕೆ ನೀಡಿರುವ ಅನುಮತಿಯಲ್ಲ. ಕಳೆದ ಎರಡು ದಿನಗಳನ್ನು ಗಮನಿಸಿದರೆ, ಜನ ಈಗಾಗಲೇ ಕೊರೊನಾವನ್ನು ಲಘುವಾಗಿ ಪರಿಗಣಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ 2ನೇ ಅಲೆ ಪೂರ್ವದಲ್ಲಿ ಓಡಾಡಿದ ಹಾಗೆಯೇ ಜನ ಬೀದಿಗಿಳಿಯಲು ಮುಂದಾಗಿದ್ದಾರೆ.
ಗುರುವಾರ ಸರಕಾರ ಘೋಷಿಸಿರುವ ಅನ್‌ ಲಾಕ್‌ ಆಧಾರದ ಮೇಲೆ ಹೇಳುವುದಾದರೆ, ಇದು ಈಗಿರುವ ಲಾಕ್‌ ಡೌನ್‌ಅನ್ನು ಒಂದಷ್ಟು ಸಡಿಲಿಕೆ ಮಾಡಿರುವುದು ಮಾತ್ರ. ಅಂದರೆ ಬೆಳಗ್ಗೆ 6ರಿಂದ 10ರ ವರೆಗೆ ತೆರೆಯುತ್ತಿದ್ದ ದಿನಸಿ ಅಂಗಡಿಗಳನ್ನು ಮಧ್ಯಾಹ್ನ 2 ಗಂಟೆವರೆಗೆ ತೆರೆಯುವುದು. ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಅವಕಾಶ ನೀಡಿರುವುದು, ಕಾರ್ಖಾನೆಗಳಲ್ಲಿ ಶೇ.50 ಕಾರ್ಮಿಕರೊಂದಿಗೆ ಕೆಲಸ ಮಾಡುವುದು, ಗಾರ್ಮೆಂಟ್ಸ್‌ ಗಳಲ್ಲಿ ಶೇ.30ರ ಹಾಜರಾತಿಯೊಂದಿಗೆ ಕೆಲಸ ಮಾಡುವುದು ಈಗ ನೀಡಿರುವ ಸಡಿಲಿಕೆಯಲ್ಲಿ ಸೇರಿದೆ.

ಹಾಗೆಯೇ ಬಸ್‌ ಸಂಚಾರ, ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಿಲ್ಲ. ಟ್ಯಾಕ್ಸಿಗಳು ಮತ್ತು ಆಟೋಗಳಲ್ಲಿ ಇಬ್ಬರು ಪ್ರಯಾಣಿಕರೊಂದಿಗೆ ಓಡಾಡಲು ಅವಕಾಶ ನೀಡಲಾಗಿದೆ. ಈ ಎಲ್ಲ ಸಡಿಲಿಕೆ ಮಧ್ಯೆ ಪ್ರಮುಖವಾದ ಅಂಶವೊಂದು ನೆನಪಿನಲ್ಲಿ ಇರಿಸಿಕೊಳ್ಳಬೇಕಾಗಿದೆ. ರಾಜ್ಯದಲ್ಲಿ ಇನ್ನೂ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಶುಕ್ರವಾರದ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗೆ ಇಳಿದಿದೆ. ಆದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚೇ ಇದೆ. ಹೀಗಾಗಿ ಜನ ಕೊರೊನಾ ಬಗ್ಗೆ ಎಚ್ಚರಿಕೆಯಿಂದ ಇರಬೇಕಾದದ್ದು ಮುಖ್ಯ.

ಏಕೆಂದರೆ ಹರಡುವಿಕೆ ವಿಚಾರದಲ್ಲಿ ಕೊರೊನಾ ಹೆಚ್ಚು ಅಪಾಯಕಾರಿ. ಒಂದೇ ಒಂದು ಪ್ರಕರಣವಿದ್ದರೂ, ಅದು ಐದು ಮಂದಿಗೆ ಹಬ್ಬಿಸಬಹುದು. ಹೀಗಾಗಿ ಕೊರೊನಾ ಸಂಪೂರ್ಣವಾಗಿ ತಹಬದಿಗೆ ಬರುವ ವರೆಗೆ ಅದರ ಬಗ್ಗೆ ಎಚ್ಚರಿಕೆಯಿಂದ ಇರಲೇಬೇಕಾದದ್ದು ಜನರ ಕರ್ತವ್ಯ. ಈಗ ಸಡಿಲಿಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಜನ ಸುಖಾಸುಮ್ಮನೆ ಬೀದಿಗೆ ಇಳಿಯಬಾರದು. ಆವಶ್ಯಕವಿದ್ದರಷ್ಟೇ ಮನೆಯಿಂದ ಆಚೆ ಬರಬೇಕು.

ಸದ್ಯ ಕಾರ್ಖಾನೆಗಳು ಮತ್ತು ಗಾರ್ಮೆಂಟ್‌ ಗಳಿಗೆ ಷರತ್ತಿನ ಮೇರೆಗೆ ಅನುಮತಿ ನೀಡಲಾಗಿದೆ. ಸರಕಾರಿ ಕಚೇರಿಗಳನ್ನು ಪ್ರಮುಖವಾದ ಮತ್ತು ಅತ್ಯಗತ್ಯ ಸೇವೆ ಒದಗಿಸುವ ಕಚೇರಿಗಳಿಗೆ ಅನುಮತಿ ನೀಡಲಾಗಿದೆ. ಉಳಿದ ಕಚೇರಿಗಳು, ಖಾಸಗಿ ಸಂಸ್ಥೆಗಳನ್ನು ತೆರೆಯಲು ಇನ್ನೂ ಅನುಮತಿ ನೀಡಿಲ್ಲ.

ಹೀಗಾಗಿ ಜನ ಮನೆಯಿಂದ ಆಚೆ ಬರಬೇಕಾಗಿಲ್ಲ. ಮನೆಯಿಂದ ಹೊರಗೆ ಬಂದರೂ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಮುಂದುವರಿಸಬೇಕು. ಗುಂಪು ಸೇರಬಾರದು. ಮದುವೆಯಲ್ಲಿ 40 ಜನ ಹಾಗೂ ಅಂತ್ಯ ಸಂಸ್ಕಾರದಲ್ಲಿ 5 ಜನರಿಗೆ ಅವಕಾಶ ನೀಡಲಾಗಿದೆ. ಸರಕಾರ ನೀಡಿರುವ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆಯಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.