ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು


Team Udayavani, May 24, 2022, 6:05 AM IST

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ತುಮಕೂರು: ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಸ್ಥಾನ ಹೊಂದಿರುವ ಕಲ್ಪತರು ನಾಡಿನಲ್ಲಿ ರಾಜಕೀಯ ಚುರುಕು ಗೊಂಡಿದೆ. ವಿಧಾನಸಭಾ ಚುನಾವಣೆ ಎದುರಿಸಲು ಇನ್ನೂ ಒಂದು ವರ್ಷವಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮೂರೂ ಪಕ್ಷಗಳು ತಮ್ಮ ಇರುವ ಸ್ಥಾನಗಳನ್ನು ಗಟ್ಟಿಗೊಳಿಸಿ ಕೊಳ್ಳುವುದರ ಜತೆಗೆ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಗದ್ದುಗೆ ಹಿಡಿಯಬೇಕೆಂದು ಸಜ್ಜುಗೊಂಡಿವೆ.

ಮೂರು ಪಕ್ಷಗಳಲ್ಲಿನ ಮುಖಂಡರು ಪಕ್ಷಾಂತರ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಚುನಾವಣ ರಣರಂಗಕ್ಕೆ ಸಿದ್ಧವಾಗುತ್ತಿದ್ದಾರೆ.

ಕಲ್ಪತರು ನಾಡಿನಲ್ಲಿಯೂ ರಾಜಕೀಯ ಚಟುವಟಿಕೆ ಗರಿಗೆದ ರಿದೆ. ಜೆಡಿಎಸ್‌ನ ಇಬ್ಬರು ಪ್ರಭಾವಿ ಮುಖಂಡರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಕೆಲವು ವಿಧಾನ ಸಭಾ ಕ್ಷೇತ್ರಗಳಲ್ಲಿ ಹೊಸಬರು ರಾಜಕೀಯ ಪ್ರವೇಶಿಸಲು ರಂಗ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ಪ್ರಮುಖ ವಿಪಕ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ವಲಸೆ ಹೋಗಲಾರಂಭಿಸಿದ್ದಾರೆ.
ವಿಧಾನಸಭಾ ಚುನಾವಣೆಯ ದಿನ ಎಣಿಸು ತ್ತಿರುವ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿರು ವಂತೆಯೇ ಜಿಲ್ಲೆಯಲ್ಲಿರುವ ಹನ್ನೊಂದು ವಿಧಾನ ಸಭಾ ಕ್ಷೇತ್ರಗಳಲ್ಲಿ ಈಗ ಹಾಲಿ ಇರುವ ಶಾಸಕರು ಮತ್ತೆ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲು ಕ್ಷೇತ್ರವಾರು ಪ್ರವಾಸ ಆರಂಭಿಸಿದ್ದಾರೆ.

ಅದೇ ರೀತಿ ಕಳೆದ ಚುನಾವಣೆಯಲ್ಲಿ ಪರಾಭವಗೊಂಡವರು ಈ ಬಾರಿಯೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಸಂಘಟನೆಯಲ್ಲಿ ತೊಡಗಿದ್ದಾರೆ.

ತುಮಕೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ.ಗೌರಿಶಂಕರ್‌, ಪಾವಗಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ, ಮಧುಗಿರಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ವೀರಭದ್ರಯ್ಯ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ| ಜಿ.ಪರಮೇಶ್ವರ್‌, ಶಿರಾ ಕ್ಷೇತ್ರದ ಬಿಜೆಪಿ ಶಾಸಕ ಡಾ| ಸಿ.ಎಂ.ರಾಜೇಶ್‌ ಗೌಡ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ, ಸಚಿವ ಜೆ.ಸಿ.ಮಾಧುಸ್ವಾಮಿ, ತಿಪ ಟೂರು ಕ್ಷೇತ್ರದ ಬಿಜೆಪಿ ಶಾಸಕ ಸಚಿವ ಬಿ.ಸಿ.ನಾಗೇಶ್‌, ತುರು ವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಮ್‌, ಕುಣಿ ಗಲ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ| ರಂಗನಾಥ್‌ ಗುಬ್ಬಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಮತ್ತೆ ತಮ್ಮ ಕ್ಷೇತ್ರ ವನ್ನು ಭದ್ರ ಮಾಡಿಕೊಳ್ಳಲು ಕಾರ್ಯತಂತ್ರ ಆರಂಭಿಸಿದ್ದಾರೆ.

ಇವರ ಎದುರಾಳಿ ಪಕ್ಷದ ಮುಖಂಡರು ಕೂಡ ಈ ಬಾರಿ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಬೇಕು ಎನ್ನುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಪಕ್ಷಾಂತರ ಪರ್ವ ಆರಂಭ: ಪ್ರತೀ ವಿಧಾನಸಭಾ ಚುನಾವಣೆ ವೇಳೆಯಲ್ಲಿ ವಿವಿಧ ಪಕ್ಷಗಳಿಂದ ಮುಖಂಡರು ಪಕ್ಷಾಂತರ ಮಾಡುವುದು ಸಾಮಾನ್ಯ. ಅದರಂತೆ ಚುನಾವಣೆಗೆ ಒಂದು ವರ್ಷ ಮೊದಲೇ ಜಿಲ್ಲೆಯಲ್ಲಿ ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಹೋಗುತ್ತಿದ್ದಾರೆ. ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳಿಂದ ಬಿಜೆಪಿ ಪಕ್ಷಕ್ಕೆ ಮತ್ತು ಬಿಜೆಪಿ ಪಕ್ಷದಿಂದ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಜಿಗಿಯುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಜೆಡಿಎಸ್‌ನಿಂದ ಸ್ಪರ್ಧಿಸಿ ಪರಿಷತ್‌ ಸದಸ್ಯರಾಗಿದ್ದ ಬೆಮೆಲ್‌ ಕಾಂತರಾಜು ಅವರು ಜೆಡಿಎಸ್‌ ತೊರೆದು ಕೈ ಹಿಡಿದಿದ್ದಾರೆ. ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರೂ ಮಾಜಿ ಸಚಿವರಾದ ಎಸ್‌.ಆರ್‌ ಶ್ರೀನಿವಾಸ್‌ ಈಗಾಗಲೇ ಜೆಡಿಎಸ್‌ನಿಂದ ದೂರವಿದ್ದಾರೆ. ಅವರೂ ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್‌ ಮುಖಂಡರ ಸಭೆ ಮಾಡಿರುವ ಅವರು ಅಧಿಕೃತವಾಗಿ ಘೋಷಣೆ ಮಾಡಬೇಕಾಗಿರುವುದು ಮಾತ್ರ ಬಾಕಿಯಿದೆ.

ತುಮಕೂರು ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಇದ್ದರೂ, ಆಡಳಿತಾರೂಢ ಬಿಜೆಪಿಯಲ್ಲಿ ಒಂದು ಗುಂಪಿನಿಂದ ಆಂತರಿಕ ಬೇಗುದಿ ಎದ್ದಿದೆ. ಕುಣಿಗಲ್‌ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಡಾ| ರಂಗನಾಥ್‌ ಇದ್ದರೂ ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಕಾಂಗ್ರೆಸ್‌ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ ಮತ್ತು ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಯಾಗಿದ್ದರೂ ಸಾಸಲು ಸತೀಶ್‌ ಪಕ್ಷದ ಟಿಕೆಟ್‌ ಮೇಲೆ ಕಣ್ಣಿಟ್ಟಿ ದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಹಾಲಿ ಸಚಿವ ಜೆ.ಸಿ . ಮಾಧುಸ್ವಾಮಿ ಇದ್ದರೂ ಮಾಜಿ ಶಾಸಕ ಕೆ.ಎಸ್‌.ಕಿರಣ್‌ ಕುಮಾರ್‌ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ. ಈ ರೀತಿ ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ರಾಜಕೀಯ ಚದುರಂಗದಾಟಗಳು ಆರಂಭಗೊಂಡಿವೆ.

– ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.