Vinesh Disqualify: ಒಲಿಂಪಿಕ್ಸ್ ನಿಯಮಾವಳಿ ಮರು ವಿಮರ್ಶೆಯಾಗಲಿ: ಬೊಮ್ಮಾಯಿ
ಪ್ರತಿಯೊಂದು ರೌಂಡ್‌ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ
Team Udayavani, Aug 8, 2024, 6:07 AM IST
ಬೆಂಗಳೂರು: ಅಂತಾರಾಷ್ಟ್ರೀಯ ಕುಸ್ತಿ ಪಟು ವಿನೇಶ್ ಪೋಗಾಟ್ ಅವರ ತೂಕ ಕೇವಲ 100 ಗ್ರಾಂ ಹೆಚ್ಚಳವಾಗಿದೆ ಎಂದು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ನಿಯಮಾವಳಿಗಳ ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಸಾಮಾನ್ಯವಾಗಿ ಯಾವುದಾದರೂ ಆಟದ ಆರಂಭದಲ್ಲಿ ತೂಕ ಮತ್ತು ಇತರ ಅರ್ಹತೆಗಳನ್ನು ನೋಡುತ್ತಾರೆ. ಆದರೆ, ಪ್ರತಿಯೊಂದು ರೌಂಡ್‌ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ. ಈ ಒಲಿಂಪಿಕ್ಸ್‌ನಲ್ಲಿ ತೂಕ ನೋಡಿರುವುದು ಪ್ರಶ್ನಾರ್ಹವಾಗಿದೆ. ಪ್ರತಿದಿನ ವ್ಯಕ್ತಿಯ ತೂಕದಲ್ಲಿ ನೂರರಿಂದ ಮುನ್ನೂರು ಗ್ರಾಂ ವ್ಯತ್ಯಾಸವಾಗುತ್ತಿರುತ್ತದೆ. ಅವರ ತೂಕದಲ್ಲಿ ನೂರು ಗ್ರಾಂ ಹೆಚ್ಚಾಗಿದೆ ಎಂದು ಸ್ಪರ್ಧೆಯಿಂದ ಅಮಾನತು ಮಾಡುವುದು ಸಮಂಜಸ ಅಲ್ಲ ಎಂದವರು ತಿಳಿಸಿದ್ದಾರೆ.
ಪ್ರತಿ ದಿನ ಮನುಷ್ಯನ ದೇಹದ ತೂಕದಲ್ಲಿ ಹೆಚ್ಚಾಗುವುದು ಕಡಿಮೆಯಾಗುವುದು ನೈಸರ್ಗಿಕ ಪ್ರಕ್ರಿಯೆ. ಮೆಟಾಬೆಲಿಕ್ ಚಟುವಟಿಕೆ ಕಡಿಮೆ ಆದಾಗ ತೂಕ ಹೆಚ್ಚಾಗುತ್ತದೆ. ಮೆಟಾಬೆಲಿಕ್ ಚಟುವಟಿಕೆ ಹೆಚ್ಚಾದಾಗ ತೂಕ ಕಡಿಮೆ ಆಗುತ್ತದೆ. ಹೀಗಾಗಿ ತೂಕ ಹೆಚ್ಚಳದ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದಿರುವುದು ಬಹಳ ದೊಡ್ಡ ಅನ್ಯಾಯವಾದಂತಾಗಿದ್ದು ಇದನ್ನು ಪುನರ್ ಪರಿಶೀಲನೆ ಮಾಡುವುದು ಅಗತ್ಯ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ: ಜೋಶಿ
Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ
Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್
Haveri; ಮಹದಾಯಿ ಯೋಜನೆಗೆ ಹಿನ್ನಡೆ ಮಾಡಿರುವುದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ
Kalaburagi: ಹನಿಟ್ರ್ಯಾಪ್ ಬ್ಲಾಕ್ ಮೇಲ್ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 14ನೇ ರೀಲ್ಸ್ ಪ್ರಸಾರ
Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ: ಜೋಶಿ
Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?
KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!
Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.