ನಾವು ಹುಟ್ಟಿನಿಂದಲೇ ಹಿಂದುಗಳು, ಬಿಜೆಪಿಯವರಂತೆ ಹಿಂದುತ್ವ ನಾಟಕ ಮಾಡಲ್ಲ: ಡಿಕೆಶಿ

Team Udayavani, Dec 19, 2022, 1:37 PM IST

we does not do Hindutva drama like BJP says dk shivakumar

ಬೆಳಗಾವಿ: ನಾವೆಲ್ಲರೂ ಹುಟ್ಟುತ್ತಲೇ ಹಿಂದೂಗಳು, ಸಾಯುವಾಗಲೂ ಹಿಂದೂಗಳೇ, ಹಿಂದೂ ಆಚರಣೆಗಳನ್ನೇ ಪಾಲಿಸುತ್ತಾ ಬಂದಿದ್ದೇವೆ. ನಮ್ಮಲ್ಲಿ ಹಿಂದೂ ಭಾವ, ಭಕ್ತಿ, ಆಚಾರ, ವಿಚಾರ, ಅಡಗಿದೆ. ಆದರೆ ಬಿಜೆಪಿಯವರು ನಾಟಕದ ಹಿಂದುತ್ವ ತೋರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ನಾಡಿನ ಮಹನೀಯರ ಭಾವಚಿತ್ರಗಳನ್ನು ವಿಧಾನಸಭೆಯಲ್ಲಿ ಅಳವಡಿಸಬೇಕು ಎಂದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಪ್ರವೇಶ ದ್ವಾರದಲ್ಲಿ ಸೋಮವಾರ ಮಹನೀಯರ ಭಿತ್ತಿಚಿತ್ರ ಹಿಡಿದು ಪ್ರದರ್ಶನ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ನಾವು ಸರ್ಕಾರಕ್ಕೆ ಆಗ್ರಹಿಸುತ್ತಿರುವುದೇನೆಂದರೆ, ಈ ಸುವರ್ಣಸೌಧದಲ್ಲಿ ದೇಶದ ಮೊದಲ ಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಪಂಡಿತ್ ಜವಹಾರ್ ಲಾಲ್ ನೆಹರೂ, ಶಿಶುನಾಳ ಷರೀಫರು, ವಿಶ್ವಗುರು ಬಸವಣ್ಣ, ನಾರಾಯಣಗುರು, ಕನಕದಾಸರು, ಅಂಬೇಡ್ಕರ್, ಬಾಬು ಜಗಜೀವನ ರಾಮ್, ಸರ್ದಾರ್ ವಲ್ಲಭಬಾಯ್ ಪಟೇಲ್, ಕುವೆಂಪು ಹಾಗೂ ಈ ಭಾಗದ ಪ್ರಮುಖ ವ್ಯಕ್ತಿಗಳ ಭಾವಚಿತ್ರಗಳನ್ನು ಹಾಕಬೇಕು ಎಂದರು.

ನನಗೆ ಸ್ಪೀಕರ್ ಅವರ ಕಚೇರಿಯಿಂದ ದೂರವಾಣಿ ಕರೆ ಮಾಡಿ ಇಂದು ಬೆಳಗ್ಗೆ 10 ಗಂಟೆಗೆ, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮವಿದೆ, ನೀವು ಆಗಮಿಸಬೇಕು ಎಂದು ಆಹ್ವಾನಿಸಿದ್ದರು. ನಾವು ಬಹಳ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದೆವು. ಆದರೆ ಇಲ್ಲಿ ಬಂದ ನಂತರ ಮಾಧ್ಯಮಗಳ ಮೂಲಕ ಸಾರ್ವಕರ್ ಫೋಟೋ ಕೂಡ ಹಾಕಲಾಗುತ್ತಿದೆ ಎಂದು ತಿಳಿಯಿತು. ಸಾರ್ವಕರ್ ಅವರಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ. ಇದು ವಿವಾದಾತ್ಮಕ ವಿಚಾರವಾಗಿದ್ದು, ಈ ಬಗ್ಗೆ ನಾವು ಬೇರೆ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಇಲ್ಲಿ ಜ್ವಲಂತ ಸಮಸ್ಯೆಗಳಿವೆ. ಅನೇಕ ಪ್ರತಿಭಟನೆಗಳು ನಡೆದಿವೆ. ಭ್ರಷ್ಟಾಚಾರ, ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಇವೆಲ್ಲವೂ ಚರ್ಚೆ ಆಗಲಿದೆ ಎಂಬ ಕಾರಣಕ್ಕೆ, ದಾರಿ ತಪ್ಪಿಸಲು ಸರ್ಕಾರ ಈ ಪ್ರಯತ್ನಕ್ಕೆ ಮುಂದಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಪಂದ್ಯ ಸೋತರೂ ವಿಶ್ವದ ಹೃದಯ ಗೆದ್ದ ಕಿಲಿಯನ್ ಎಂಬಪ್ಪೆ ಎಂಬ ಮೋಡಿಗಾರ

ಬಿಜೆಪಿಯವರು ಅಜೆಂಡಾ ರಚಿಸಿದ್ದಾರೆಯೇ ಎಂಬ ಪ್ರಶ್ನೆಗೆ, ‘ನಾರಾಯಣಗುರು, ಕುವೆಂಪು, ಬಸವಣ್ಣ, ಕನಕದಾಸರು, ವಾಲ್ಮೀಕಿ ಸೇರಿದಂತೆ ನಮಗೆ ಎಲ್ಲರೂ ಬೇಕು. ಸಾಮಾಜಿಕ ನ್ಯಾಯ ಸಿಗಬೇಕು. ದೇಶ, ರಾಜ್ಯದ ಹಿತಕ್ಕೆ ಶ್ರಮಿಸಿ ಅಮರರಾದ ಎಲ್ಲಾ ಧರ್ಮದ ನಾಯಕರು ಬೇಕು ಎಂಬುದು ನಮ್ಮ ಅಜೆಂಡಾ’ ಎಂದು ತಿಳಿಸಿದರು.

ಬಿಜೆಪಿಯವರು ಈ ವಿಚಾರವನ್ನು ಈಗ ಯಾಕೆ ಪ್ರಸ್ತಾಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ‘ಭ್ರಷ್ಟಾಚಾರ, ಮತದಾರರ ಮಾಹಿತಿ ಕಳುವು, 40% ಕಮಿಷನ್, ಈ ಭಾಗದ ಜನರಿಗೆ ಆಗುತ್ತಿರುವ ಅನ್ಯಾಯ, ದುರಾಡಳಿತದ ಬಗ್ಗೆ ಚರ್ಚೆ ಆಗಬಾರದು ಎಂಬ ಕಾರಣಕ್ಕೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಸುಳ್ಳಿನ ರಾಜ. ಸಾರ್ವಕರ್ ಫೋಟೋ ಹಾಕಿರುವುದು ನನಗೆ ಗೊತ್ತೇ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ನೀವು ನಿಮಗೆ ಬೇಕಾದ ಸಮರ್ಥನೆ ಮಾಡಿಕೊಳ್ಳಿ. ಆದರೆ ನನಗೆ ಗೊತ್ತೇ ಇಲ್ಲ ಎಂದು ಸುಳ್ಳು ಹೇಳಿ ಮುಖ್ಯಮಂತ್ರಿ ಸ್ಥಾನಕ್ಕೆ ಧಕ್ಕೆ ತರಬಾರದು’ ಎಂದು ಹೇಳಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.