ಮಾ.5ರಂದು ನೀಟ್ 2ನೇ ಸುತ್ತಿನ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ?
Team Udayavani, Mar 3, 2022, 6:40 AM IST
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಯುಜಿ ನೀಟ್-2021) 2ನೇ ಸುತ್ತಿನ ವೇಳಾಪಟ್ಟಿಯು ಮಾ. 5ರಂದು ಪ್ರಕಟವಾಗುವ ಸಾಧ್ಯತೆಗಳಿವೆ.
ಮೊದಲ ಸುತ್ತಿನ ಕೊನ್ಸೆಲಿಂಗ್ ನಡೆಸಿದ್ದು, ವಿದ್ಯಾರ್ಥಿಗಳು ಫೆ. 16ಕ್ಕೆ ಕಾಲೇಜು ಪ್ರವೇಶ ಪಡೆದುಕೊಂಡಿದ್ದಾರೆ. ಇದೀಗ ಎರಡನೇ ಸುತ್ತಿನ ನೀಟ್ ಕೌನ್ಸೆಲಿಂಗ್ ಆರಂಭವಾಗಬೇಕಿದೆ. ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ಈ ವೇಳಾಪಟ್ಟಿಯನ್ನು ಪ್ರಕಟಿಸಬೇಕಿದೆ. ಇದೇ 5ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಕೆಇಎ ಮೂಲಗಳು ತಿಳಿಸಿವೆ.
20 ದಿನದಲ್ಲಿ 2 ಸುತ್ತು
ಯುಜಿ ನೀಟ್-2021ರ ಪ್ರವೇಶ ಪ್ರಕ್ರಿಯೆಯನ್ನು ಮಾ. 20ರೊಳಗೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಎರಡನೇ ಮತ್ತು ಮಾಪ್ ಅಪ್ ಸುತ್ತಿನ ಕೌನ್ಸೆಲಿಂಗ್ ಅನ್ನು ಉಳಿದ 18 ದಿನಗಳಲ್ಲಿ ನಡೆಸಬೇಕಿದೆ. ನಿಗದಿತ ಸಮಯದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆಯೇ ಅಥವಾ ಮತ್ತೆ ವಿಳಂಬವಾಗಲಿದೆಯೇ ಎಂಬುದನ್ನು ಕಾಯ್ದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ