
ಬ್ಯಾಂಕ್ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ
Team Udayavani, Jun 3, 2023, 5:26 AM IST

ಮಂಗಳೂರು: ಮಹಿಳೆಯೋರ್ವರಿಂದ ಆಕೆಯ ಪತಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು 1.21 ಲ.ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮಹಿಳೆಯೋರ್ವರಿಗೆ ಅ. 11 ರಂದು ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಸಂದೇಶ ಕಳುಹಿಸಿದ್ದ. ಅದರ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸಲು ಡೆಬಿಟ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರ ನೀಡುವಂತೆ ತಿಳಿಸಿದ. ಮಹಿಳೆ ಅದನ್ನು ನಿಜವೆಂದು ನಂಬಿ ತನ್ನ ಪತಿಯ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ್ದರು. ಅನಂತರ ಅವರ ಮೊಬೈಲ್‌ಗೆ ಬಂದಿದ್ದ ಒಟಿಪಿಯನ್ನು ಕೂಡ ನೀಡಿದ್ದರು. ಅದೇ ರೀತಿ ಇನ್ನೊಂದು ಬ್ಯಾಂಕ್‌ನ ಖಾತೆಯ ಮಾಹಿತಿಯನ್ನು ಕೂಡ ಆರೋಪಿ ಪಡೆದುಕೊಂಡಿದ್ದಾನೆ. ಕೆಲವು ಸಮಯದ ಬಳಿಕ ಅವರ ಪತಿಯ ಒಂದು ಖಾತೆಯಿಂದ 71,400 ರೂ. ಮತ್ತು ಇನ್ನೊಂದು ಖಾತೆಯಿಂದ 50,000 ರೂ. ಸೇರಿದಂತೆ ಒಟ್ಟು 1,21,400 ರೂ.ಗಳನ್ನು ಅಪರಿಚಿತ ಮೋಸದಿಂದ ವರ್ಗಾಯಿಸಿಕೊಂಡಿದ್ದಾನೆ.
ಬ್ಯಾಂಕ್ ಖಾತೆ ವಿವರ ಪಡೆದು ವಂಚನೆ
ಮಂಗಳೂರು: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಕೋಟೆಕಾರಿನ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು ಅವರಿಗೆ ಮೇ 28ರಂದು 7328868392, 9948824849 ಸಂಖ್ಯೆಗಳಿಂದ ಸಂದೇಶ ಬಂದಿತ್ತು. ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಖಾತೆ ಈ ದಿನ ಸ್ಥಗಿತವಾಗಿದ್ದು ಅದನ್ನು ತಡೆಯಲು ಪಾನ್ ಕಾರ್ಡ್ ಮಾಹಿತಿ ಅಪ್‌ಡೇಟ್ ಮಾಡಬೇಕು ಎಂಬುದಾಗಿ ಇತ್ತು. ಅದರ ಜತೆ ಲಿಂಕ್ ಕೂಡ ಕಳುಹಿಸಲಾಗಿತ್ತು. ದೂರುದಾರರು ಮೇ 30ರಂದು ಆ ಲಿಂಕ್‌ನ್ನು ಕ್ಲಿಕ್ ಮಾಡಿದ್ದು ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಪೋರ್ಟಲ್ ರೂಪದ ಒಂದು ಪೇಜ್ ತೆರೆದಿದ್ದು ಅದರಲ್ಲಿ ಹೆಸರು, ಮೊಬೈಲ್ ಸಂಖ್ಯೆ, ಹುಟ್ಟಿದ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆಗಳನ್ನು ನಮೂದಿಸಿದ್ದಾರೆ. ಬಳಿಕ ಅವರ ಮೊಬೈಲ್‌ಗೆ ಒಟಿಪಿ ಬಂದಿತ್ತು. ಅವರು ಒಟಿಪಿಯನ್ನು ಅದೇ ಪೇಜ್‌ನಲ್ಲಿ ನಮೂದಿಸಿದ್ದಾರೆ. ಅನಂತರ ಹಂತ ಹಂತವಾಗಿ 43,551 ರೂ. ಕಡಿತವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ