ಹೆಣ್ಣು ಮಗುವಿಗೆ ಜನ್ಮ ನೀಡಿದ 11 ವರ್ಷದ ಅತ್ಯಾಚಾರ ಸಂತ್ರಸ್ತೆ
Team Udayavani, Dec 8, 2021, 3:11 PM IST
ಉದಯಪುರ: ಇಲ್ಲಿನ ಕಾಮಾಂಧನೊಬ್ಬನಿಂದ ಅತ್ಯಾಚಾರಕ್ಕೊಳಗಾದ 11 ವರ್ಷದ ಬಾಲಕಿ ರಾಜಸ್ಥಾನದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕಳೆದ ವಾರ ಗುರುವಾರ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಎರಡು ದಿನಗಳ ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ರಿಷಭದೇವ್ ವೃತ್ತದ ಅಧಿಕಾರಿ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಮಾಹಿತಿ ಪಡೆದು, ಆಕೆಯ ತಂದೆ ಭಾನುವಾರ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ ನಂತರ ನಾವು ಕುಟುಂಬವನ್ನು ಸಂಪರ್ಕಿಸಿದ್ದೇವೆ” ಎಂದು ಅವರು ಹೇಳಿದರು.
ಖೇರ್ವಾರಾ ಪೊಲೀಸ್ ಠಾಣೆಯಲ್ಲಿ 19 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
”ಆರೋಪಿ ಮತ್ತು ಸಂತ್ರಸ್ತೆಯ ಚಿಕ್ಕಪ್ಪ ಗುಜರಾತ್ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಕಳೆದ ವರ್ಷ ಮೊದಲ ಕೋವಿಡ್ ಲಾಕ್ಡೌನ್ ಸಮಯದಲ್ಲಿ ಗುಜರಾತ್ನಿಂದ ಹಿಂದಿರುಗಿದಾಗ ಅವರು ಹುಡುಗಿಯ ಮನೆಯಲ್ಲಿ ತಂಗಿದ್ದರು. ಅಂದಿನಿಂದ ಅವರು ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸಂಪರ್ಕದಲ್ಲಿದ್ದರು,”ಎಂದು ಅವರು ಹೇಳಿದರು.
ಆರೋಪಿಯು ತಲೆಮರೆಸಿಕೊಂಡಿದ್ದು, ಅವನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ