ಭಾರತದಲ್ಲಿ 24ಗಂಟೆಯಲ್ಲಿ 17,070 ಕೋವಿಡ್ ಪ್ರಕರಣ ದೃಢ, 23 ಮಂದಿ ಸಾವು
ಕಳೆದ 24ಗಂಟೆಯಲ್ಲಿ 2,634 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
Team Udayavani, Jul 1, 2022, 11:40 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 17,070 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 23 ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,69,234ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜುಲೈ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಿಎಂ ಆಗುತ್ತಲೇ ಠಾಕ್ರೆಗೆ ಟಕ್ಕರ್ ಕೊಟ್ಟ ಶಿಂಧೆ; ಮೆಟ್ರೋ ಯೋಜನೆ ಮತ್ತೆ ಆರೆ ಕಾಲೋನಿಗೆ
ಗುರುವಾರ ದೇಶದಲ್ಲಿ 18,000 ಕೋವಿಡ್ ಪ್ರಕರಣ ವರದಿಯಾಗಿದ್ದು, ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,07,189ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ.
ಕಳೆದ 24ಗಂಟೆಯಲ್ಲಿ 2,634 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 23 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,139ಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ತಿಳಿಸಿದೆ.
24 ಗಂಟೆಯಲ್ಲಿ ಭಾರತದಲ್ಲಿ 14,413 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.55ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ 3.40ರಷ್ಟಿದ್ದು, ವಾರದ ಪಾಸಿಟಿವಿಟಿ ದರ 3.59ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?