
August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ
Team Udayavani, Jun 9, 2023, 7:48 AM IST

ಬೆಂಗಳೂರು: ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳ ಪ್ರಾರಂಭಕ್ಕೆ ರಾಜ್ಯ ಸರಕಾರ ದಿನಾಂಕ ಘೋಷಣೆ ಮಾಡಿದೆ. ಬೆಂಗ ಳೂರಿ ನಲ್ಲಿ ಮಾತ ನಾಡಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಆ. 1ರಂದು ಕಲಬುರಗಿ ಯಲ್ಲಿ ಗೃಹಜ್ಯೋತಿ, ಆ. 17 ಯಾ 18ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡ ಲಾಗು ವುದು. ಜತೆಗೆ ಎಲ್ಲ ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಎಂದರು.
ಅನಗತ್ಯ ಮಾಹಿತಿ, ದಾಖಲೆ ಕೇಳಿ ಫಲಾನುಭವಿಗಳು ರೋಸಿ ಹೋಗುವಂಥ ಸನ್ನಿವೇಶ ಸೃಷ್ಟಿಸ ಬೇಡಿ. ಕುಂಟು ನೆಪ ಹೇಳಿ ಅರ್ಜಿ ಗಳನ್ನು ತಿರಸ್ಕರಿಸಬೇಡಿ ಎಂದು ಅಧಿಕಾರಿಗಳ ಜತೆಗೆ ಸಭೆ ನಡೆ ಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.
ಮಕ್ಕಳು ತೆರಿಗೆದಾರರಾಗಿದ್ದರೆ ಇಲ್ಲ
ಮಕ್ಕಳು ತೆರಿಗೆ ಪಾವತಿದಾರರಾಗಿ ದ್ದರೆ ಆ ಕುಟುಂಬಕ್ಕೆ ಯೋಜನೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿಕೆ ನೀಡಿದ್ದಾರೆ. ಇದ ರಿಂದಾಗಿ ಗೃಹಲಕ್ಷ್ಮೀ ಯೋಜನೆ ಯಲ್ಲಿ ಮತ್ತೂಂದು ಗೊಂದಲ ಮೂಡಿದೆ.
ಸರಕಾರಿ ನೌಕರರು ತೆರಿಗೆ ಪಾವ ತಿಸುತ್ತಾರೆ. ಹೀಗಾಗಿ ಅವರಿಗೆ ಯೋಜನೆ ಅನ್ವಯವಾಗುವುದಿಲ್ಲ. ಎಪಿಎಲ್ ಕಾರ್ಡ್‌ದಾರರ ಪೈಕಿ 11 ಲಕ್ಷ ಜನರು ತೆರಿಗೆದಾರರಾಗಿದ್ದಾರೆ. ಮುಂದಿನ ದಿನಗಳಲ್ಲಿ ಎಪಿಎಲ್ ಕಾರ್ಡ್‌ದಾರರೂ ಯೋಜನೆ ವ್ಯಾಪ್ತಿಗೆ ಬರುವಂತೆ ನಿಯಮ ರೂಪಿಸ ಲಾಗುವುದು. ಶೇ. 85ರಿಂದ ಶೇ. 88ರಷ್ಟು ಮಹಿಳೆಯರಿಗೆ ಈ ಯೋಜನೆ ತಲುಪಲಿದೆ ಎಂದು ಹೆಬ್ಟಾಳ್ಕರ್ ವಿವರಿಸಿದರು.
ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ರಹಿತ ಮಹಿಳೆಯರನ್ನೂ ಪರಿಗಣಿಸುತ್ತೇವೆ. ಕೆಲವರು ಈಗ ಬಿಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿ¨ªಾರೆ. ಕೆಲವರ ಬಳಿ ಬಿಪಿಎಲ್ ಕಾರ್ಡ್ ಇಲ್ಲ. ಸುಮ್ಮನೆ ಅರ್ಜಿ ತಿರಸ್ಕರಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಸರಕಾರ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸ ಮಾಡಲಿದೆ ಎಂದು ಹೆಬ್ಟಾಳ್ಕರ್ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Congress ಜಗದೀಶ್ ಶೆಟ್ಟರ್ಗೆ ಆಪರೇಷನ್ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ

Cauvery issueತಮಿಳುನಾಡು ಸಿಎಂ ಭೇಟಿಗೆ 48 ತಾಸು ಕಾದು ಬರಿಗೈಯಲ್ಲಿ ಮರಳಿದ ಲೆಹರ್ ಸಿಂಗ್!
MUST WATCH
ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?