ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕರ ವಲಸೆ ಪರ್ವ; ಇಬ್ಬರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆ
ಇದೇ ಕ್ಷೇತ್ರದಲ್ಲಿ ಟಿಕೆಟ್ ಕೊಡುವುದಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ
Team Udayavani, Dec 28, 2021, 3:17 PM IST
ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಇಬ್ಬರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ(ಡಿಸೆಂಬರ್ 28) ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:‘ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ
ಪಕ್ಷದ ಹಿರಿಯ ಮುಖಂಡ, ಸಂಸದ ಪ್ರತಾಪ್ ಬಾಜ್ವಾ ಅವರ ಸಹೋದರ ಕಾಂಗ್ರೆಸ್ ಶಾಸಕ ಫತೇಹ್ ಜಂಗ್ ಸಿಂಗ್ ಬಾಜ್ವಾ ಹಾಗೂ ಹರ್ ಗೋವಿಂದ್ ಪುರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಲ್ವಿಂದರ್ ಸಿಂಗ್ ಲಾಡ್ಡಿ ಭಾರತೀಯ ಜನತಾ ಪಕ್ಷದ ಜತೆ ಕೈಜೋಡಿಸಿರುವುದಾಗಿ ವರದಿ ಹೇಳಿದೆ.
ಇತ್ತೀಚೆಗಷ್ಟೇ ನಡೆದ ರಾಲಿಯಲ್ಲಿ ಪಂಜಾಬ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ನವಜ್ಯೋತ್ ಸಿಂಗ್ ಸಿಧು, ಫತೇಹ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದರು. ಈ ಸಂದರ್ಭದಲ್ಲಿ ತನಗೆ ಇದೇ ಕ್ಷೇತ್ರದಲ್ಲಿ ಟಿಕೆಟ್ ಕೊಡುವುದಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ತಿರುಗೇಟು ನೀಡಿದ್ದರು.
ಕಳೆದ ವಾರ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಶಾಸಕ ರಾಣಾ ಗುರ್ಮೀತ್ ಸೋಧಿ ಕೂಡಾ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈ ಮೂವರು ಶಾಸಕರು ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಆಪ್ತರಾಗಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಫಿನಾಡಿನಲ್ಲಿ ಮಳೆಯ ಅವಾಂತರ : ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು
ಮನೆ ಮನೆಯಲ್ಲೂ ತ್ರಿವರ್ಣ: ರಾಷ್ಟ್ರಧ್ವಜ ಹಾರಿಸುವ ಮುನ್ನ ಈ ಅಂಶಗಳು ನೆನಪಿನಲ್ಲಿರಲಿ
ದೇಗುಲದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿ ಮತ್ತೆರಡು ದೇವಸ್ಥಾನದಲ್ಲಿ ಕಳವುಗೈದಿದ್ದನಂತೆ
ಉಳ್ಳಾಲ : ಕಿಂಡರ್ ಗಾರ್ಟನ್ ಶಿಕ್ಷಕಿ ಮೃತದೇಹ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆ
ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!