ನೌಗಾಮ್ ಸೆಕ್ಟರ್: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ, ಎಕೆ47 ವಶಕ್ಕೆ
ಉಗ್ರರ ಬಳಿ ಇದ್ದ ಎರಡು ಎಕೆ47 ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Team Udayavani, Jul 11, 2020, 11:25 AM IST
ನವದೆಹಲಿ: ಗಡಿ ನಿಯಂತ್ರಣ ರೇಖೆ ಸಮೀಪ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರ್ ಬಾರಾಮುಲ್ಲಾದ ನೌಗಾಮ್ ಸೆಕ್ಟರ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಸೇನಾ ವಕ್ತಾರರ ಮಾಹಿತಿ ಪ್ರಕಾರ, ಶನಿವಾರ ನಸುಕಿನ ವೇಳೆ ನೌಗಾಮ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ಸಮೀಪ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿರುವುದಾಗಿ ತಿಳಿಸಿದೆ. ಈ ವೇಳೆ ಭದ್ರತಾ ಪಡೆ ನಡೆಸಿದ ಹೊಂಚು ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ವಿವರಿಸಿದೆ.
ಉಗ್ರರ ಬಳಿ ಇದ್ದ ಎರಡು ಎಕೆ47 ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಡಿನಿಯಂತ್ರಣ ರೇಖೆ ಬಳಿಯಿಂದ ಉಗ್ರರ ಗುಂಪು ಒಳನುಸುಳಿ ಬರಲು ಸತತವಾಗಿ ಯತ್ನಿಸುತ್ತಿದ್ದು, ಭದ್ರತಾ ಪಡೆ ಕಣ್ಗಾವಲಿನಿಂದಾಗಿ ಉಗ್ರರ ಸಂಚು ವಿಫಲವಾಗುತ್ತಿರುವುದಾಗಿ ವರದಿ ತಿಳಿಸಿದೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ನಂತರ ಭದ್ರತಾ ಪಡೆ ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಭಾರತದೊಳಕ್ಕೆ ಕಳುಹಿಸಲು ಯತ್ನಿಸುತ್ತಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ