
2019ರ ಜಾಮಿಯಾ ಮಿಲಿಯಾ ಗಲಭೆ : ಶರ್ಜೀಲ್ ಇಮಾಮ್‌ಗೆ ಜಾಮೀನು
Team Udayavani, Feb 4, 2023, 10:12 PM IST

ನವದೆಹಲಿ: ಯಾವುದೆ ವಿಚಾರಗಳಲ್ಲಿ ಪ್ರತಿರೋಧ ಒಡ್ಡುವವರ ಅಥವಾ ಭಿನ್ನಾಭಿಪ್ರಾಯ ಹೊಂದಿರುವವರ ವಿರುದ್ಧ ಕೇಸು ದಾಖಲಿಸುವ ಬದಲು, ತನಿಖಾ ಸಂಸ್ಥೆಗಳು ಗಲಭೆಗಳ ಹಿಂದಿನ ಸಂಚುಕೋರರ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2019ರ ಜಾಮಿಯಾ ಮಿಲಿಯಾ ಗಲಭೆ ಸಂಬಂಧಿಸಿ ಬಂಧಿತನಾಗಿದ್ದ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ಹಾಗೂ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತ ಆಸಿಫ್ ಇಕ್ಬಾಲ್ ತನ್ಹಾರನ್ನು ಸಾಕೇತ್ ಕೋರ್ಟ್ ಬಿಡುಗಡೆಗೊಳಿಸಿದೆ.
ಈ ವೇಳೆ ಹೆಚ್ಚುವರಿ ಸೆಷನ್ ನ್ಯಾಯಾಧೀಶರಾದ ಅರುಲ್ ವರ್ಮಾ, ಸಂಚುಕೋರರು ಹಾಗೂ ಪ್ರತಿರೋಧ ಒಡ್ಡುವವರ ನಡುವೆ ವ್ಯತ್ಯಾಸವಿದೆ. ಸಂಚುಕೋರರ ವಿರುದ್ಧದ ಕ್ರಮ ಆದ್ಯತೆಯಾಗಬೇಕು ಎಂದು ತನಿಖಾ ಸಂಸ್ಥೆಗಳಿಗೆ ಸಲಹೆ ನೀಡಿದ್ದಾರೆ. ಇಮಾಮ್ ವಿರುದ್ಧ ಮತ್ತೊಂದು ಪ್ರಕರಣ ಇತ್ಯರ್ಥಕ್ಕೆ ಬಾಕಿಯಿರುವ ಕಾರಣ ಅವರು ಸೆರೆವಾಸದಲ್ಲಿಯೇ ಮುಂದುವರಿದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್‌ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!