ಕಬ್ಬು ಬೆಳೆಗಾರರಿಗೆ 204 ಕೋಟಿ ಬಂಪರ್ ಕೊಡುಗೆ ಘೋಷಿಸಿದ ರಾಜ್ಯ ಸರ್ಕಾರ
Team Udayavani, Dec 6, 2022, 6:20 AM IST
ಬೆಂಗಳೂರು: ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭಾಂಶವನ್ನು ರೈತರಿಗೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಬಂಪರ್ ಕೊಡುಗೆ ಘೋಷಿಸಿದೆ.
ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಇಲ್ಲಿವರೆಗೆ ಸಕ್ಕರೆಯ ಉಪ ಉತ್ಪನ್ನಗಳ ಮೇಲೆ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನದ ಮೇಲೆ ರೈತರಿಗೆ ಲಾಭಾಂಶ ನೀಡಲು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಉಪ ಉತ್ಪನ್ನಗಳ ಲಾಭಾಂಶ ಬೇಕೆಂದು ಅನೇಕ ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅದರಂತೆ, ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭ ನೀಡಲು ಸರ್ಕಾರ ಮುಂದಾಗಿದ್ದು, ಎಫ್ಆರ್‌ಪಿ ದರದ ಪಾವತಿ ಬಳಿಕ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂಪಾಯಿಯಂತೆ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ನೀಡಲಾಗುತ್ತಿದೆ.
ರಾಜ್ಯ ಸರ್ಕಾರದ ನಿರ್ಣಯದ ಕುರಿತು ತಕ್ಷಣ ಆದೇಶ ಹೊರಡಿಸುವಂತೆ ಕಬ್ಬು ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿ ರೈತ ಪ್ರತಿನಿಧಿಗಳು, ಕಬ್ಬು ನಿಯಂತ್ರಣ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರ ತಿರಸ್ಕಾರ
ಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಸಕ್ಕರೆ ಸಚಿವರು ಕಬ್ಬಿನ ಉಪ ಉತ್ಪನ್ನಗಳಿಂದ ಟನ್ ಕಬ್ಬಿಗೆ 126 ರೂ. ಲಾಭ ಬರುತ್ತದೆ. ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಎಫ್ಆರ್‌ಪಿಗೆ ಹೆಚ್ಚುವರಿಯಾಗಿ 50 ರೂ. ನೀಡುವಂತೆ ಕಾರ್ಖಾನೆಗಳಿಗೆ ಆದೇಶ ಹೊರಡಿಸುವುದಾಗಿ ಸಕ್ಕರೆ ಸಚಿವ ಮುನೇನಕೊಪ್ಪ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತಿಳಿಸಿದರು. ಆದರೆ, ಸರ್ಕಾರದ ಈ ನಿಲುವು ತಿರಸ್ಕರಿಸಲಾಗಿದ್ದು, ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ತಿಳಿಸಿದ್ದಾರೆ.
ಆದರೆ, ಈ ವಿಚಾರವಾಗಿ ಮಂಗಳವಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ರೈತರ ಪರ ಇದೆ:
ಸರ್ಕಾರದ ತೀರ್ಮಾನವನ್ನು ತಿರಸ್ಕರಿಸಿ ರೈತರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರ ಹೋರಾಟ ಇರಬೇಕು. ಆಗ ಮಾತ್ರ ಅನೇಕ ವಿಚಾರಗಳು ಸರ್ಕಾರದ ಗಮನಕ್ಕೆ ಬರುತ್ತವೆ. ರೈತರಿಗಾಗಿ, ರೈತರ ಪರ ಇರುವ ಸರ್ಕಾರ ನಮ್ಮದು. ಇಲ್ಲಿವರೆಗೆ ಸಕ್ಕರೆ ಉಪ ಉತ್ಪನ್ನ ಮೇಲಿನ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಕಬ್ಬಿನ ಉಪ ಉತ್ಪನ್ನ ಮೇಲೆ ಲಾಭಾಂಶ ನೀಡಲು ನಿರ್ಧರಿಸಿದೆ. ಮೊದಲ ಹಂತದಲ್ಲಿ 204 ಕೋಟಿ ರೂ. ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಈ ವರ್ಷದ ಕಬ್ಬು ನುರಿಸುವಿಕೆ ಮುಗಿದ ಮೇಲೆ ಲಾಭ ಆಧರಿಸಿ ರೈತರಿಗೆ ಲಾಭಾಂಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ವಿಜಯಪುರ: ಶೀಲ ಸಂಕಿಸಿ ಪತ್ನಿ ಹತ್ಯೆಗೈದವನಿಗೆ ಜೀವಾವಧಿ ಶಿಕ್ಷೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ