ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ
ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿದ್ದು, ಏಕನಾಥ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
Team Udayavani, Jul 7, 2022, 2:18 PM IST
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಂಪುಟದಲ್ಲಿ 45 ಸಚಿವರುಗಳಿಗೆ ಅವಕಾಶ ದೊರಕುವ ಸಾಧ್ಯತೆ ಇದ್ದು, ಇದರಲ್ಲಿ ಬಿಜೆಪಿಯ 25 ಸಚಿವರು ಹಾಗೂ ಶಿಂಧೆ ಬಣದ 13 ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ
ನೂತನ ಸಚಿವ ಸಂಪುಟದಲ್ಲಿ ಬಿಜೆಪಿಗೆ 25 ಸಚಿವ ಸ್ಥಾನ, ಏಕನಾಥ ಶಿಂಧೆಯ ಶಿವೇನಾದ 13 ಶಾಸಕರಿಗೆ ಸಚಿವ ಸ್ಥಾನ ದೊರಕಲಿದ್ದು, ಇನ್ನುಳಿದಂತೆ ಪಕ್ಷೇತರರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂದು ವರದಿ ವಿವರಿಸಿದೆ.
ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಹೊರತುಪಡಿಸಿ, ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದು ಎಂದು ಮೂಲಗಳು ಹೇಳಿವೆ.
ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯ ಹಿನ್ನೆಲೆಯಲ್ಲಿ ಹೊಸಬರಿಗೆ ಸಚಿವ ಸ್ಥಾನ ನೀಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಉದ್ಧವ್ ಠಾಕ್ರೆ ಜತೆಗಿನ ಅಸಮಧಾನದಿಂದ ಶಿಂಧೆ ಬಂಡಾಯ ಎದ್ದ ಪರಿಣಾಮ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿತ್ತು. ಬಹುಮತ ಸಾಬೀತು ಪಡಿಸುವ ಮುನ್ನ ಠಾಕ್ರೆ ರಾಜೀನಾಮೆ ನೀಡುವ ಮೂಲಕ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿದ್ದು, ಏಕನಾಥ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದಲ್ಲಿ ಹೆಚ್ಚಿದ ಪ್ರವಾಸಿಗರು: ದರಗಳು ದುಪ್ಪಟ್ಟು
ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ