
ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ
Team Udayavani, Mar 26, 2023, 5:27 PM IST

ಪಶ್ಚಿಮ ಬಂಗಾಳ : ಪ್ರಯಾಣಿಕರನ್ನು ಹೊತ್ತ ಬಸ್ಸಿಗೆ ತೈಲ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ 27 ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಹಲ್ದಿಯಾ – ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಭಾನುವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (ಎಸ್‌ಬಿಎಸ್‌ಟಿಸಿ) ಬಸ್ ನಲ್ಲಿದ್ದ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಿದ್ದು ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಟೊಮ್ಲುಕ್ ವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಅದರಲ್ಲಿ 12 ಪ್ರಯಾಣಿಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಗಂಭೀರ ಗಾಯಗೊಂಡ ಹದಿನೈದು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ,
ಬಸ್ ದಿಘಾದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು ಎನ್ನಲಾಗಿದೆ ಈ ವೇಳೆ ಹಲ್ದಿಯಾ – ಮೆಚೆಡಾ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
West Bengal | 27 passengers injured in a collision between an SBSTC (South Bengal State Transport Corporation) bus and an oil tanker on Haldia Mecheda State Highway in Purba Medinipur earlier today. pic.twitter.com/HWHmzZSuel
— ANI (@ANI) March 26, 2023
ಟಾಪ್ ನ್ಯೂಸ್
